ಕಾರವಾರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಮುಸ್ಲಿಂ, ಕ್ರೀಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್ ವಿದ್ಯಾರ್ಥಿಗಳಿಗೆ, ಪಿ.ಯು.ಸಿ ಯಿಂದ ಪಿ.ಎಚ್.ಡಿ ವರೆಗಿನ ಹಾಗೂ ಮೆರಿಟ್-ಕಂ-ಮೀನ್ಸ್ ತಾಂತ್ರಿಕ, ವೃತ್ತಿಪರ ಕೋರ್ಸ್ಗಳ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಬಯಸುವ ವಿದ್ಯಾರ್ಥಿಯ ಪಾಲಕರ ವಾರ್ಷಿಕ ಆದಾಯದವು ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ರೂ.1. ಲಕ್ಷ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ರೂ.2 ಲಕ್ಷ, ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ರೂ.2.5 ಲಕ್ಷ ಒಳಗಿರಬೇಕು. ಅರ್ಜಿಯನ್ನು https://scholarships.gov.in/ ನಲ್ಲಿ ನೇರವಾಗಿ ಸಲ್ಲಿಸಬಹುದಾಗಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ, À ಅರ್ಜಿ ಸಲ್ಲಿಸಿದ ನಂತರ ಆನ್ಲೈನ್ ಪ್ರತಿಯೊಂದಿಗೆ ಅವಶ್ಯ ದಾಖಲೆಯನ್ನೊಳಗೊಂಡ ಒಂದು (ಸೆಟ್) ಪ್ರತಿಯನ್ನು ತಯಾರಿಸಿ ಓದುತ್ತಿರುವ ಶಾಲೆಯ ಮುಖ್ಯೋಪಾಧ್ಯಾಯರಿಗೆ ಸಲ್ಲಿಸಬೇಕು. ಮೆಟ್ರಿಕ್ ನಂತರದ ಮತ್ತು ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ, ಅರ್ಜಿ ಸಲ್ಲಿಸಿದ ನಂತರ ಆನ್ಲೈನ್ ಪ್ರತಿಯೊಂದಿಗೆ ಅವಶ್ಯ ದಾಖಲೆಯನ್ನೊಳಗೊಂಡ ಒಂದು (ಸೆಟ್) ಪ್ರತಿಯನ್ನು ತಯಾರಿಸಿ ವಿದ್ಯಾರ್ಥಿಗಳು ಓದುತ್ತಿರುವ ಕಾಲೇಜಿಗೆ ಸಲ್ಲಿಸುವುದು. ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ನವಂಬರ್ 15 ಕೊನೆಯ ದಿನವಾದರೆ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ನವಂಬರ್ 30 ಕೊನೆಯ ದಿನವಾಗಿರುತ್ತದೆ.
ಆನ್ ಲೈನ್ ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳೆಂದರೆ, ಹಿಂದಿನ ವರ್ಷದ/sಸೆಮ್ ಅಂಕಪಟ್ಟಿ,ನಮೂದಾಗಿರುವ ಫೀ ರಶೀದಿ, ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್, ಆಧಾರ ಕಾರ್ಡ ಜೆರಾಕ್ಷ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ,bonafied/study certificate mcm ವಿದ್ಯಾರ್ಥಿಗಳಿಗೆ ಮಾತ್ರ ಮತ್ತು ವಿದ್ಯಾರ್ಥಿಯ ಪೋಟೋ ಆಗಿರುತ್ತವೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ https://dom.karnataka.gov.in/ ಅಥವಾ ಆಯಾ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಕಾರವಾರ, ದೂರವಾಣಿ ಸಂ�ಖ್ಯೆ 08382-220336 ಅಥವಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಹಾಯವಾಣಿ 8277799990ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಪ್ರವೀಣ್ ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment