ಹೊನ್ನಾವರ : ಪಟ್ಟಣದ ಬಂದರು ರಸ್ತೆಯ ತುಳಸಿ ಫಾರ್ಮ ಮೆಡಿಕಲ್ ಶಾಪ್ ಎದುರಿನ ಮೆಟ್ಟಿಲಿನ ಮೇಲೆ ಅಪರಿಚಿತ ವ್ಯಕ್ತಿಯ ಮೃತ ದೇಹ ಪತ್ತೆಯಾಗಿದೆ.
ಸುಮಾರು 45 ರಿಂದ 50 ವರ್ಷದ ಅಪರಿಚಿತ ಗಂಡಸು ಅನಾರೋಗ್ಯದಿಂದಲೋ ಅಥವಾ ಇನ್ಯಾವುದೋ ಕಾರಣದಿಂದಲೋ ಮೃತಪಟ್ಟಿದ್ದು, ಸದರಿ ಮೃತದೇಹದ ಮೇಲೆ ಮುಂದಿನ ಕಾನೂನು ಕ್ರಮ ಜರುಗಿಸ ಬೇಕು ಎಂದು ಸ್ಥಳೀಯ ವ್ಯಾಪಾರಿ ನಾಗೇಶ ರಘುನಾಥ ಪ್ರಭು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರುದಾಖಲಿಸಿದ್ದಾರೆ. ಹೊನ್ನಾವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
Leave a Comment