ಬೆಂಗಳೂರು : ಶರಾವತಿ ಮುಳಗಡೆ ಸಂತ್ರಸ್ತರಿಗೆ ಪುನರ್ ವಸತಿ ಕಲ್ಪಿಸಲು ಸರ್ಕಾರ ಹೊಸ ಸಮೀಕ್ಷೆ ನಡೆಸಲು ಮುಂದಾಗಿದೆ. ಜಿಲ್ಲಾಧಿಕಾರಿ ಅರಣ್ಯ ವ್ಯವಸ್ಥಾಪನಧಿಕಾರಿಗಳನ್ನು ನೇಮಿಸಿ 3-5 ತಿಂಗಳೊಳಗಾಗಿ ಹೊಸ ಸಮೀಕ್ಷೆ ಮುಗಿಸಿ ಕೇಂದ್ರಕ್ಕೆ ವರದಿ ಸಲ್ಲಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಶರಾವತಿ ಹಿನ್ನೀರಿನಿಂದ ಮುಳಗಡೆಯಾದ ರೈತರ ಸಮಸ್ಯೆಗಳು, ಶರಾವತಿ ಅಭಯಾರಣ್ಯ, ಅರಣ್ಯ ಕಾಯ್ದೆ ಸಂಬAಧ ವಿಧಾನಸೌಧಲ್ಲಿ ಶಿವಮೊಗ್ಗ ಜಿಲ್ಲೆಯ ಶಾಸಕರು ಹಾಗೂ ಸಂಬAಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ, ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿ ಸೂಚಿಸಿರುವಂತೆ ಅನುಸೂಚಿತ ಮೀಸಲು ಅರಣ್ಯ ಪ್ರದೇಶ ಡಿನೋಟಿಫಿಕೇಷನ್ ನಿರ್ಧಾರ ಕ್ಯಗೊಳ್ಳುವ ಮುನ್ನ ಕೆಂದ್ರ ಸರ್ಕಾರದ ಅನುಮತಿ ಅಗತ್ಯವಿದೆ ಎಂದರು.
ಈ ಹಿಂದೆ ಮಾಜಿ ಮುಖ್ಯಂಮತ್ರಿ ರಚಿಸಿದ್ದ ಟಸ್ಕ್ ಫೋರ್ಸ್ ಕ್ರಯಾಶೀಲಗೊಳಿಸಲು ಟಸ್ಕ್ ಫೋರ್ಸ್ ಅಧಿಕಾರಿಗಳನ್ನು ನೇಮಿಸುವುದಗಿ ಹೇಳಿದ ಬೊಮ್ಮಾಯಿ ಶರಾವತಿ ಮುಳಗಡೆ ಸಂತ್ರಸ್ತರಿಗೆ ಭೊಮಿ ಹಕ್ತು ನೀಡುವ ಸಂಬAಧ 1978 ರ ಅರಣ್ಯ ಸಂರಕ್ಷಣೆ ಕಾಯ್ದೆ ಅನ್ವಯ ಕೇಂದ್ರ ಸರ್ಕಾರದ ಪೂರ್ವಾಸುಮತಿ ಪಡೆಯಲು ಸಂಪೂರ್ಣ ಮಾಹಿತಿ ಸಂಗ್ರಹಿಸಿ ಕಳುಹಿಸುವಂತೆ ಅಧಿಕರಿಗಳಿಗೆ ಸೂಚಿಸಿದರು.
ಮಾಜಿ ಸಿಎಂ ಹಾಗೂ ಶಿಕಾರಿಪುರ ಶಾಸಕ ಬಿ.ಎಸ್. ಯಡಿಯೊರಪ್ಪ ಮಾತನಡಿ, ಶಿವಮೊಗ್ಗ ನಗರದ ಪ್ರಮುಖ ಭಾಗಗಳು ಸೇರಿದಂತೆ ಜನವಸತಿ ಹಾಗೂ ಸರ್ಕರಿ ಕಟ್ಟೆಗಳಿರುವ ಪ್ರದೇಶಗಳು ಅಭಯಾರಣ್ಯದ ವ್ಯಾಪ್ತಿಗೆ ಬರುತ್ತಿದ್ದು. ಗಡಿ ಪುನರ್ ನಿಗದಿಪಡಿಸುವುದರಿಂದ ಸಮಸ್ಯೆ ಬಗೆಹರಿಸಬಹುದು ಎಂದು ಸಲಹೆ ನೀಡಿದರು.
ಶಿವಮೊಗ್ಗ, ಶಿಕಾರಿಪುರ ರಾಣೆಬೆನ್ನೂರು ಹೊಸ ರೇಲ್ವೆ ಮಾರ್ಗದ ಅರಣ್ಯ ಇಲಾಖೆ ಯೋಜನೆಗಳ ಪ್ರಗತಿ ವೇಗ ಹೆಚ್ಚಿಸುವಂತೆ ಹೇಳಿದರು. ಈ ಬಗ್ಗೆ ಈಗಾಗಲೇ ಕ್ರಮ ಜರುಗಿಸಲಾಗಿದ್ದು, ವನ್ಯಜೀವಿ ಪ್ರದೇಶವನ್ನು ನಿಗದಿಪಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಸಭೆಯ ಗಮನಕ್ಕೆ ತಂದಾಗ, ಗಡಿ ನಿಗದಿಪಡಿಸುವ ಕರ್ಯವನ್ನು ತ್ವರಿತವಗಿ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಮುಖುಂತ್ರಿ ಸೂಚಿಸಿದರು. ಅಲ್ಲದೇ ಶಿವಮೊಗ್ಗ ಜಿಲ್ಲೆಯ ವಶೇಷ ಅರಣ್ಯ ಅಧಿಕಾರಿಗಳನ್ನು ನೇಮಿಸುವುದಾಗಿ ತಿಳಿಸಿದರು.
Leave a Comment