ಬೆAಗಳೂರು : ನಗರದಲ್ಲಿ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಚಿನೋನಿ ಮತ್ತು ಕ್ಲೆವಿಯನ್ ಬಂಧಿತರಾಗಿದ್ದು,
10 ಲಕ್ಷ ಮೌಲ್ಯದ 31 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಹೊರಮಾವು ಸಿಎಂ ಆರ್ ಲೇಔಟ್ 5ನೇ ಅಡ್ಡ ರಸ್ತೆ ಬಾಡಿಗೆ ಮನೆ ಮಡಿಕೊಂಡು ಮಾದಕ ದ್ರವ್ಯ ದಂಧೆ ನಡೆಸುತ್ತಿದ್ದರು.
ಈ ಬಗ್ಗೆ ಖಚಿತ ಮಾಹಿತಿ ಪಡೆದು ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದಾಗ ಡ್ರಗ್ಸ್ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರವಾಸಿ ಮೀಸಾಪಡೆದು ನಗರಕ್ಕೆ ಬಂದಿದ್ದ ಆರೋಪಿಗಳು ಅವಧಿ ಮುಗಿದ ಮೇಲೂ ಅಕ್ರಮವಾಗಿ ನೆಲೆಸಿದ್ದರು.
ವದೇಶಿಯರ ಬಳಿ ಪಾಸ್ ಪೋರ್ಟ್ ಮತ್ತು ವೀಸಾ ಪಡೆಯದೆ ಬಡಿಗೆ ನೀಡಿದ ಆರೋಪದ ಮೇಲೆ ಮನೆ ಮಾಲಿಕರ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದರೆ.
Leave a Comment