
ಯಲ್ಲಾಪುರ : ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ತಾಲೂಕಿನ ಕುಂದರಗಿ ಗ್ರಾಮ ಪಂಚಾಯತ ವ್ಯಾಪ್ತಿಯ ದೊಡ್ಡಬೇಣ ಗ್ರಾಮದಲ್ಲಿ ಗ್ರಾಮ ಅರಣ್ಯ ಸಮಿತಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಜಿಲ್ಲಾ ಪಂಚಾಯತ ಅನುದಾನದಲ್ಲಿ ನಿರ್ಮಾಣ ಮಾಡಲಾಗಿರುವ ” ವನ ಸಿರಿ ” ನೂತನ ಸಭಾ ಭವನವನ್ನು ಉದ್ಘಾಟಿಸಿ ನಂತರ ಗಿಡ ನೆಟ್ಟು ನೀರುಣಿಸುವುದರ ಮೂಲಕವಾಗಿ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಹಾಗೂ ನೂತನವಾಗಿ ನಿರ್ಮಾಣ ಮಾಡಲಾಗಿರುವ ಜಕ್ಕೊಳ್ಳಿ – ದೊಡ್ಡಬೇಣ ಸಿ.ಸಿ ರಸ್ತೆಯನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷೆ ಶ್ರೀಮತಿ ದೀಪಾ ಸಿದ್ದಿ, ಉಪಾಧ್ಯಕ್ಷರಾದ ಶ್ರೀ ದಾಕ್ಲು ಪಾಟೀಲ್, ವಿ.ಎಫ್.ಎಸ್ ಅಧ್ಯಕ್ಷರಾದ ನಾರಾಯಣ ಹೆಗಡೆ, ಗ್ರಾಮ ಪಂಚಾಯತ ಸದಸ್ಯರು, ಅರಣ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Leave a Comment