
ಯಲ್ಲಾಪುರ: ಗಾಂಧೀ ಜಯಂತಿ ಹಾಗೂ ಲಾಲಬಹುದ್ದೂರ ಶಾಸ್ತಿç ಅವರ ಜನ್ಮದಿನದ ಅಂಗವಾಗಿ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ವತಿಯಿಂದ ಪಟ್ಟಣ ಹಾಗೂ ಇಡಗುಂದಿ ಶಾಲೆಗಳಲ್ಲಿ ಭಜನೆ, ಸ್ವಚ್ಚತೆ ಹಾಗೂ ಸಭಾ ಕಾರ್ಯಕ್ರಮ ನಡೆಯಿತು.
ವಿಶ್ವದರ್ಶನ ಆಂಗ್ಲ ಮಾಧ್ಯಮ ಶಾಲೆ, ಇಡಗುಂದಿ ಪ್ರೌಢಶಾಲೆ ಹಾಗೂ ಪಟ್ಟಣದ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆಗಳಲ್ಲಿ ಪ್ರತ್ಯೇಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಇಡಗುಂದಿಯ ಪ್ರೌಢಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಪ್ರೌಢಶಾಲೆಯ ಮುಖ್ಯಾಧ್ಯಾಪಕರಾದ ಪ್ರಸನ್ನ ಹೆಗಡೆ ಅವರು ಗಾಂಧೀ ಜಯಂತಿಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ನಂತರ ಶಾಲೆಯ ಸುತ್ತಲಿನ ಪರಿಸರವನ್ನು ಸ್ವಚ್ಚಗೊಳಿಸಲಾಯಿತು. ಪಟ್ಟಣದ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿಯೂ ಭಜನೆ ಕಾರ್ಯಕ್ರಮ ನಡೆಯಿತು.
ವಿಶ್ವದರ್ಶನ ಆಂಗ್ಲ ಮಾದ್ಯಮ ಶಾಲೆಯಲ್ಲಿ ಬಾಪೂಜಿ ಹಾಗೂ ಲಾಲಬಹುದ್ದೂರ ಶಾಸ್ತಿç ಅವರ ಭಾವಚಿತ್ರಕ್ಕೆ ಶಿಕ್ಷಣ ಸಂಸ್ಥೆ ವ್ಯವಸ್ಥಾಪಕರಾದ ಗುರುರಾಜ ಕುಂದಾಪುರ ಅವರು ನಮನ ಸಲ್ಲಿಸಿ ಮಹಾತ್ಮರ ಆದರ್ಶಗಳ ಬಗ್ಗೆ ತಿಳಿಸಿದರು. ಇದಾದ ನಂತರ ಪಲ್ಲವಿ ಕೋಮಾರ, ಮಹಾದೇವಿ ಭಟ್ಟ ಅವರು ಭಜನೆ ಕಾರ್ಯಕ್ರಮ ನಡೆಸಿಕೊಟ್ಟರು. ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಾಚಾರ್ಯರಾದ ಗಣೇಶ್ ಭಟ್ಟ, ಉಪ ಪ್ರಾಚಾರ್ಯರಾದ ಆಸ್ಮಾ ಶೇಖ್, ದತ್ತಾತ್ರೇಯ ಗಾಂವ್ಕರ್ ಇತರರು ಇದ್ದರು.
Leave a Comment