ಕಾರವಾರ : ನ್ಯಾಯಬೆಲೆ ಅಂಗಡಿಗಳಲ್ಲಿ ಈಗಾಗಲೇ ಇ-ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು ಹೊರತುಪಡಿಸಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿಯನ್ನು ಮಾಡಿಸಲು ಅ.31 ರಂದು ಕೊನೆಯ ದಿನವಾಗಿದೆ.
ಮುಂಬರುವ ದಿನಗಳಲ್ಲಿ ಇ-ಕೆವೈಸಿ ಮಾಡದ ಪಡಿತರ ಚೀಟಿದಾರರ ಪಡಿತರವನ್ನು ತಡೆಹಿಡಿಯಬಹುದಾಗಿದೆ. ಇ-ಕೆವೈಸಿ ಸಂಗ್ರಹಣೆಗೆ ಯಾರಾದರೂ ಹಣ ಕೇಳಿದ್ದಲ್ಲಿ ಅಥವಾ ದೂರುಗಳಿದ್ದಲ್ಲಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬAಧಪಟ್ಟ ತಾಲೂಕು ತಹಶೀಲ್ದಾರರು ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಮಂಜುನಾಥ ರೇವಣಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment