
ಯಲ್ಲಾಪುರ : ಪಟ್ಟಣದ ತಾಲೂಕ ಪಂಚಾಯತ ಸಭಾಭವನದಲ್ಲಿ ಜಿಲ್ಲೆಯ ೬ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಇ-ಸ್ವತ್ತು ಹಾಗೂ ತೆರಿಗೆ ಪರಿಷ್ಕರಣೆಯ ಕುರಿತು ತರಬೇತಿ ಕಾರ್ಯಗಾರ ನಡೆಯಿತು. ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಜಕ್ಕಪ್ಪಗೊಳ ಸಸಿಗೆ ನೀರೆರೆಯುವ ಮೂಲಕ ತರಬೇತಿಗೆ ಚಾಲನೆ ನೀಡಿದರು. ಗ್ರಾಮಾಭಿವೃದ್ಧಿ ಮತ್ತು ಪಂ. ರಾಜ್ ಆಯುಕ್ತಾಲಯದ ಉಪ ನಿರ್ದೇಶಕ ಕೆ.ಜಿ. ಜಗದೀಶ ಹಾಗೂ ತಮಕೂರು ಜಿಲ್ಲಾ ಪಂಚಾಯತ ಅಭಿವೃದ್ಧಿ ಅಧಿಕಾರಿ ಎಚ್.ವಿ. ಲತಾ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯನಿರ್ವಹಿಸಿದರು. ಯಲ್ಲಾಪುರ ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಜಗದೀಶ ಕಮ್ಮಾರ ಸ್ವಾಗತಿಸಿದರು. ಕಾರ್ಯಾಗಾರದಲ್ಲಿ ಯಲ್ಲಾಪುರ, ಸಿದ್ದಾಪುರ, ಮುಂಡಗೋಡ, ಹಳಿಯಾಳ, ಜೊಯಿಡಾ ಹಾಗೂ ದಾಂಡೇಲಿ ತಾಲೂಕ ಅಧಿಕಾರಿಗಳು ಉಪಸ್ಥಿತರಿದ್ದರು.
Leave a Comment