ಭಟ್ಕಳ: ತಾಲೂಕಿನ ಚಿತ್ರಮಂದಿರದಲ್ಲಿ ಲೈಸನ್ಸ್ ಬಾರದ ಹಿನ್ನೆಲೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಚಿತ್ರ ಪ್ರದರ್ಶನ ಗುರುವಾರ ಸ್ಥಗಿತಗೊಂಡಿದೆ.
ಪಟ್ಟಣದ ಪುಷ್ಪಾಂಜಲಿ ಚಿತ್ರಮಂದಿರದಲ್ಲಿ ಕೋಟಿಗೊಬ್ಬ 3 ನಿಸಿಮಾ ಇಂದು ಬಿಡುಗಡೆಯಾಗಬೇಕಿತ್ತು. ಆದರೆ ಪ್ರದರ್ಶನಕ್ಕೆ ಅನುಮತಿ ಬಾರದ ಹಿನ್ನೆಲೆ ಸಿನಿಮಾ ಪ್ರದರ್ಶನ ಇಲ್ಲ ಎಂದು ಚಿತ್ರಮಂದಿರದ ಗೇಟ್ಗಳನ್ನು ಬಂದ್ ಮಾಡಲಾಗಿದೆ .
ಭಟ್ಕಳದಲ್ಲಿ ಮಧ್ಯಾಹ್ನ 2.45ಕ್ಕೆ ಮೊದಲ ಪ್ರದರ್ಶನ ಆರಂಭವಾಗಬೇಕಿತ್ತು. ಆದರೆ ಇಂದಿನ ಪ್ರದರ್ಶನ ಸ್ಥಗಿತಗೊಂಡಿದೆ.ಇದರಿಂದ ತಮ್ಮ ನೆಚ್ಚಿನ ನಟನ ಸಿನಿಮಾ ನೋಡಲು ಬಂದಿದ್ದ ಕಿಚ್ಚನ ಅಭಿಮಾನಿಗಳು ಬಂದ ದಾರಿಗೆ ಸುಂಕವಿಲ್ಲವೆಂದು ಮರಳಿ ಮನೆಗೆ ತೆರಳಿದ್ದಾರೆ.
Leave a Comment