ಹೊನ್ನಾವರ ಶರಾವತಿ ನದಿ ತೀರದ ಪುರಾಣ ಪ್ರಸಿದ್ದ ಐತಿಹಾಸಿಕ ಸ್ಥಳವಾದ ಗೇರುಸೊಪ್ಪಾ ಸೀಮೆಯ ಮುಖ್ಯಪ್ರಾಣ ದೇವರ 13ನೇ ವರ್ಷದ ಬ್ರಹ್ಮ ರಥೋತ್ಸವ ಹಾಗೂ ನೂತನ ರಜತ ಪಲ್ಲಕ್ಕಿ ಉತ್ಸವ ಡಿಸೆಂಬರ್. 3 ರಿಂದ 5ರವರೆಗೆ ನಡೆಯಲಿದೆ. ಡಿಸೆಂಬರ್ 3ರ ಬೆಳಿಗ್ಗೆ 10 ಗಂಟೆಗೆ ದೇವರ ಪ್ರಾರ್ಥನೆ, ನೂತನ ರಜತ ಪಲ್ಲಕ್ಕಿ ಸಮರ್ಪಣೆ, ಮಧ್ಯಾಹ್ನ ಅನ್ನ ಸಂತರ್ಪಣೆ ರಾತ್ರಿ ಪುಷ್ಪ ರಥೋತ್ಸವ ನಡೆಯಲಿದೆ. ಡಿಸೆಂಬರ್ . 4 ರಂದು ನವಗ್ರಹ ಶಾಂತಿ, 108 ಬ್ರಹ್ಮಕಲಶಾಭಿಷೇಕ, ಮಧ್ಯಾಹ್ನ ರಥಾರೋಹಣ, ಮಧ್ಯಾಹ್ನ ಅನ್ನ ಸಂತರ್ಪಣೆ, ಸಂಜೆ 6 ಗಂಟೆಗೆ ಬ್ರಹ್ಮರಥೋತ್ಸವ ನಡೆಯಲಿದೆ. ಡಿಸೆಂಬರ್ 5ರಂದು ಮಹಾಪೂರ್ಣಾವತಿ ಅಂಕುರಾರ್ಪಣೆಮಹಾಪ್ರಾರ್ಥನೆ ಹಾಗೂ ತೀರ್ಥಪ್ರಸಾದ ವಿತರಣೆ ಹಾಗೂ ಮಹಾಮಂಗಳಾರತಿ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಯಕ್ಷಗಾನ ಕಾರ್ಯಕ್ರಮ ನಡೆಯಲಿದೆ. ಮೂರು ದಿನ ನಡೆಯುವ ದಾರ್ಮಿಕ ಕಾರ್ಯಕ್ರಮಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಳಿಯವರು ಆಮಂತ್ರಿಸಿದ್ದಾರೆ.



shri devaki krishna wash point karki naka honavar contact; sachin mesta 9538529046,8310014860
Leave a Comment