ಬೆಂಗಳೂರು : ಅಕ್ಷರ ದಾಸೋಹ ಕಾರ್ಯಕ್ರಮಕ್ಕಾಗಿ ಬಳಸಿಕೊಂಡ ಕಾರಿಗೆ ಪಾವತಿಸಬೇಕಾದ ಬಾಡಿಗೆ ಹಣದ ಚೆಕ್ ವಿತರಿಸಲು 1ಸಾವಿರ ರು. ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಕೊಪ್ಪಳ ಜಿಲ್ಲಾ ಪಂಚಾಯಿತಿ ಕಚೇರಿ ಗುಮಾಸ್ತನಿಗೆ 13 ವರ್ಷದ ವಿಚಾರಣೆ ನಂತರ ಹೈಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರು.
ದಂಡ ವಿಧಿಸಿ ಆದೇಶ ಹೊರಡಿಸಿದೆ.ಪ್ರಕರಣದಲ್ಲಿ ಲಂಚ ಸ್ವೀಕರಿಸುವಾಗ ಪ್ರತ್ಯಕ್ಷವಾಗಿ ಸಿಕ್ಕಿಬಿದ್ದರೂ ಅಧೀನ ನ್ಯಾಯಾಲಯದಿಂದ ಖುಲಾಸೆಗೊಂಡ ಆರೋಪಿಗೆ, ಲೋಕಾಯುಕ್ತ ಪೊಲೀಸರು ಹೈಕೋರ್ಟ್ನಲ್ಲಿ ಒಂಬತ್ತು ವರ್ಷ ಕಾಲ ಸುಧೀರ್ಘವಾಗಿ ಕಾನೂನು ಹೋರಾಟ ನಡೆಸಿ ಶಿಕ್ಷೆ ಕೊಡಿಸುವಲ್ಲಿ ಸಫಲರಾಗಿದ್ದಾರೆ.
ಲಂಚ ಸ್ವೀಕರಿಸಿ ಭ್ರಷ್ಟಾಚಾರ ಎಸಗಿದ ಕೃತ್ಯವು ಅಗತ್ಯ ಸಾಕ್ಷ್ಯಧಾರಗಳ ಸಮೇತ ದೃಢಪಟ್ಟ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾ ಪಂಚಾಯಿತಿ ಹಣಕಾಸು ವಿಭಾಗದಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಎಸ್.ನಿರುಪಡಿಗೆ, ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಅವರ ನ್ಯಾಯಪೀಠ ಜೈಲು ಶಿಕ್ಷೆ ವಿಧಿಸಿದೆ.
Leave a Comment