
ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಶೋಕ ವ್ಯಕ್ತ ಪಡಿಸಿದ್ದಾರೆ.
ಉತ್ತರಕನ್ನಡ ಜಿಲ್ಲೆಯ ಹಿರಿಯ ಮುತ್ಸದ್ದಿ ನಾಯಕರು, ಬಡವರ ಸಾಮಾಜಿಕ ಹಾಗೂ ಆರ್ಥಿಕ ಪ್ರಗತಿಗಾಗಿ ತಮ್ಮ ಜೀವನದುದ್ದಕ್ಕೂ ಶ್ರಮಿಸಿದ್ದ ಕುಮಟಾ – ಹೊನ್ನಾವರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಡಾ. ಎಮ್.ಪಿ.ಕರ್ಕಿ ಅವರು ನಿಧನರಾದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ.
ಡಾ. ಎಮ್.ಪಿ ಕರ್ಕಿ ಅವರು ಜನಸಂಘದ ಕಾಲ ಘಟ್ಟದಿಂದಲೂ ಸಹ ಉತ್ತರಕನ್ನಡ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಮಹತ್ತರವಾದ ಪಾತ್ರವನ್ನು ವಹಿಸಿದರು. ಲೋಕಸಭೆ ಚುನಾವಣೆಗೆ ಯಾರು ಸಹ ಸ್ಪರ್ಧಿಸುವವರೆ ಇಲ್ಲದ ಸಂದರ್ಭದಲ್ಲಿ ಸೋಲು ಗೊತ್ತಿದ್ದರು ಸಹ ಪಕ್ಷ ಸಂಘಟನೆಗಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು, ಹಲವಾರು ವರ್ಷಗಳ ಕಾಲ ಪಕ್ಷದ ಜಿಲ್ಲಾಧ್ಯಕ್ಷರಾಗಿ ಅವರು ಸಲ್ಲಿಸಿರುವ ಸೇವೆ ಅನನ್ಯ.
ನನ್ನನ್ನು ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷನಾಗಿ ಆಯ್ಕೆ ಮಾಡುವ ಸಂದರ್ಭದಲ್ಲಿ ಡಾ.ಕರ್ಕಿ ರವರು ನೀಡಿರುವ ಸಹಕಾರ, ಸಲಹೆ ಮಾರ್ಗದರ್ಶನ ಹಾಗೂ ಅವರೊಂದಿಗೆ ಕಾರ್ಯನಿರ್ವಹಿಸಿದ್ದ ನೆನಪುಗಳು ಇಂದಿಗೂ ಸಹ ನನ್ನ ನೆನಪಿನಂಗಳದಲ್ಲಿ ಹಚ್ಚ ಹಸಿರಾಗಿದೆ, ಶ್ರೀಯುತರು ರಾಜಕೀಯದ ಜೊತೆ ಜೊತೆಯಲ್ಲಿ ಶೈಕ್ಷಣಿಕ, ವೈದ್ಯಕೀಯ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿಯೂ ಸಹ ಅಪಾರ ಕೊಡುಗೆಯನ್ನು ನೀಡಿದ್ದಾರೆ.
ಡಾ.ಎಮ್.ಪಿ.ಕರ್ಕಿ ಅವರ ನಿಧನದಿಂದಾಗಿ ಜಿಲ್ಲೆಗೆ ಹಾಗೂ ಭಾರತೀಯ ಜನತಾ ಪಕ್ಷಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.ಭಗವಂತ ಶ್ರೀಯುತರ ಆತ್ಮಕ್ಕೆ ಚಿರಶಾಂತಿ ನೀಡಿ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೆನೆ.ಎಂದಿದ್ದಾರೆ
Leave a Comment