ಹೊನ್ನಾವರ; ಕುಮಟಾ / ಹೊನ್ನಾವರ ಕ್ಷೇತ್ರದಲ್ಲಿ ೨ ಬಾರಿ ಶಾಸಕರಾಗಿ, ಪಟ್ಟಣದ ಎಸ್.ಡಿ.ಎಂ. ಕಾಲೇಜಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಮಾಜಿ ಶಾಸಕ ಡಾ. ಎಂ ಪಿ.ಕರ್ಕಿ(87) ಸೋಮವಾರ ನಿಧನರಾದರು.ಜನಸಂಘದ ಕಾಲದಿಂದ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಾಗಿ ಪಕ್ಷದ ಅತ್ಯಂತ ಕಷ್ಟ ಕಾಲದಲ್ಲಿ 18 ವರ್ಷಗಳ ಕಾಲ ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿ ಒಮ್ಮೆ ರಾಜ್ಯ ಕಾರ್ಯದರ್ಶಿಯಾಗಿಯು ಸೇವೆ ಸಲ್ಲಿಸಿದ್ದರು.

1983ಹಾಗೂ ಎರಡನೇ ಬಾರಿ 1994ರಲ್ಲಿ ಎರಡು ಬಾರು ಕುಮಟಾ/ ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿ, ಶಿಕ್ಷಣ ಕ್ಷೇತ್ರದಲ್ಲಿ ಪ್ರತಿಷ್ಟಿತ ಸಂಸ್ಥೆ ಯಾದಂತ ಶ್ರೀ ಧರ್ಮಸ್ಥಳ ಮಂಜುನಾಥೆಶ್ವರ ಕಾಲೇಜಿನಲ್ಲಿ 40 ವರ್ಷಗಳವರೆಗೆ ಸೇವೆ ಸಲ್ಲಿಸಿರುವ ಹಿರಿಮೆ ಹೊಂದಿದ್ದಾರೆ. ಮೃತರು ಪತ್ನಿ, ಪುತ್ರಿ, ಪುತ್ರ ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಶಾಸಕರಾದ ದಿನಕರ ಶೆಟ್ಟಿ, ಸುನೀಲ ನಾಯ್ಕ, ಬಿಜೆಪಿ ತಾಲೂಕ ಅಧ್ಯಕ್ಷ ರಾಜೇಶ ಭಂಡಾರಿ, ಪ.ಪಂ ಅಧ್ಯಕ್ಷ ಶಿವರಾಜ ಮೇಸ್ತ, ಎಂ.ಪಿ.ಐ ಸೊಸೈಟಿ ಉಪಾಧ್ಯಕ್ಷ. ಕೃಷ್ಣಮೂರ್ತಿ ಭಟ್ ಶಿವಾನಿ ಪ್ರಾಚಾರ್ಯೆ ವಿಜಯಲಕ್ಷ್ಮಿ ನಾಯಕ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸಿದ್ದಾರೆ.
shri devaki krishna wash point karki naka honavar contact; sachin mesta 9538529046,8310014860
shri devaki krishna wash point karki naka honavar contact; sachin mesta 9538529046,8310014860
Leave a Comment