
ಯಲ್ಲಾಪುರ : ಕ್ಷೇತ್ರದಾದ್ಯಂತ ಸಿ.ಎಸ್.ಆರ್ ನ 5 ಕೋಟಿ ವೆಚ್ಚದಲ್ಲಿ ಶೈಕ್ಷಣಿಕ ಸಂಬಂದ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುತ್ತಿದ್ದು ನನ್ನ ಪ್ರಥಮ ಆಧ್ಯತೆ ಶಿಕ್ಷಣ ಕ್ಷೇತ್ರವಾಗಿದೆ. ಮುಂದಿನ ದಿನಗಳಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಯಾವುದೆ ಕೊರತೆ ಉಂಟಾಗದಂತೆ ಕಾಯ್ದುಕೊಳ್ಳುವುದೆ ನನ್ನ ಗುರಿಯಾಗಿದೆ. ವಿದ್ಯಾರ್ಥಿಗಳು ಇಂತಹ ವಿಚಾರಗಳ ಸದುಪಯೋಗ ಪಡೆದುಕೊಳ್ಳಬೇಕಿದೆ ಎಂದು ಕಾರ್ಮಿಕ ಖಾತೆ ಸಚಿವರಾದ ಶಿವರಾಮ್ ಹೆಬ್ಬಾರ್ ಹೇಳಿದರು ಅವರು ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಟೊಯೋಟಾ ಕಿರ್ಲೋಸ್ಕರ್ ಕಂಪನಿ ಬೆಂಗಳೂರು ಸಚಿವ ಶಿವರಾಮ ಹೆಬ್ಬಾರ್ ಅವರ ಮನವಿಯ ಮೇರೆಗೆ ತಮ್ಮ ಸಿ.ಎಸ್.ಆರ್ ಅನುದಾನದ ಅಡಿಯಲ್ಲಿಕಾಲೇಜಿನ ಆವರಣದಲ್ಲಿ ಸುಮಾರು 35 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸುಸಜ್ಜಿತವಾದ ” ವಿಜ್ಞಾನ ಪ್ರಯೋಗಾಲಯಕ್ಕೆ ಭೂಮಿ ಪೂಜೆ ನೆರೆವೆರಿಸುವದರ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷೆ ಸುನಂದಾ ದಾಸ್, ಉಪಾಧ್ಯಕ್ಷರಾದ ಶ್ಯಾಮಿಲಿ ಪಾಟಣಕರ್, ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್.ಗಾಂವ್ಕರ್, ಯುವಮೋರ್ಚಾ ಅಧ್ಯಕ್ಷ ಪ್ರದೀಪ ಯಲ್ಲಾಪುರಕರ್, ಸ್ಥಾಯಿಸಮಿತಿ ಅಧ್ಯಕ್ಷ ಅಮಿತ್ ಅಂಗಡಿ, ಪ್ರಮುಖರಾದ ವಿಜಯ ಮಿರಾಶಿ, ಪ.ಪಂ ಮಾಜಿ ಸದಸ್ಯ ವಿನೋದ ತಳೇಕರ್ ಟೊಯೋಟಾ ಕಂಪನಿಯರಾಜೇಂದ್ರ ಹೆಗಡೆ, ಈಶ್ವರ ಬಾಬು ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Leave a Comment