ಹೊನ್ನಾವರ; ಕೃಷಿ ಕೆಲಸದಲ್ಲಿ ತೊಡಗಿದ್ದಾಗ ಆಕಸ್ಮಿಕವಾಗಿ ಮೃತಪಟ್ಟ ಅಡಿಕೆಕುಳಿಯ ನಾರಾಯಣ ಮರಾಠಿ ಕುಟುಂಬಕ್ಕೆ ಸರ್ಕಾರದಿಂದ ಮಂಜೂರಾದ ಪರಿಹಾರಧನ ಶಾಸಕ ಸುನೀಲ ನಾಯ್ಕ ವಿತರಿಸಿದರು.
ಅಡಿಕೆಕುಳಿಯ ನಾರಾಯಣ ರಾಮ ಮರಾಠಿಯವರು, ಕೃಷಿ ಕೆಲಸದಲ್ಲಿ ತೊಡಗಿದ್ದಾಗ ಆಕಸ್ಮಿಕವಾಗಿ ಮೃತಪಟ್ಟಿದ್ದರು, ಕೆಲ ತಿಂಗಳ ಹಿಂದೆ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ವೈಯಕ್ತಿಕವಾಗಿ ಆರ್ಥಿಕ ನೆರವನ್ನು ನೀಡಿ ಸರ್ಕಾರದಿಂದ ಹೆಚ್ಚಿನ ಪರಿಹಾರವನ್ನು ದೊರಕಿಸಿ ಕೊಡುವ ಭರವಸೆಯನ್ನು ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕರಾದ ಸುನೀಲ ನಾಯ್ಕ ನೀಡಿದ್ದರು.

ಇದೀಗ ಸರ್ಕಾರದಿಂದ ಒಂದು ಲಕ್ಷ ರೂಪಾಯಿ ಪರಿಹಾರ ಮಂಜೂರಾಗಿದ್ದು, ಆದೇಶ ಪ್ರತಿಯನ್ನು ಕುಟುಂಬಸ್ಥರಿಗೆ ಶಾಸಕ ಸುನೀಲ ನಾಯ್ಕ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯತಿ ಸದಸ್ಯರಾದ ಗಣಪತಿ ಗೌಡ ಚಿತ್ತಾರ, ಮಾರುತಿ ಗೌಡ, ಬಿಜೆಪು ಮುಖಂಡ ಶ್ರೀಧರ ನಾಯ್ಕ ಮಂಕಿ ಪಕ್ಷದ ಕಾರ್ಯಕರ್ತರು ಸಾರ್ವಜನಿಕರು ಉಪಸ್ಥಿತರಿದ್ದರು.
shri devaki krishna wash point karki naka honavar contact; sachin mesta 9538529046,8310014860
Leave a Comment