ಹೊನ್ನಾವರ: ತಾಲೂಕಿನ ಕೆಳಗಿನೂರು ಸಮೀಪದ ಅಪ್ಸರಕೊಂಡ ಕ್ರಾಸ್ ಬಳಿ ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ವಾಹನದಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಕಿ ಭಾಗದಿಂದ ಹೊನ್ನಾವರ ಕಡೆ ಬರುತ್ತಿದ್ದ ಬಾಳೆಕಾಯಿ ತುಂಬಿದ ವಾಹನ ಹಾಗೂಅಪ್ಸರಕೊಂಡ ತಿರುವಿನಿಂದ ಹೆದ್ದಾರಿಗೆ ಏಕಾಏಕಿ ಬಂದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಜಖಂ ಆಗಿದೆ.
ಲಾರಿ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಈ ಸಂಭದ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಕೆಲ ಸಮಯ ವ್ಯತಯ ಉಂಟಾಗಿತ್ತು. ಸ್ಥಳಕ್ಕೆ ಮಂಕಿ ಪೋಲಿಸರು ಹಾಗೂ ಐ ಆರ್.ಬಿ ಸಿಬ್ಬಂದಿಗಳು ಆಗಮಿಸಿ ವಾಹನ ತೆರವುಗೊಳಿಸಿ ಸಂಚಾರ ವ್ಯವಸ್ಥೆ ಸುಗಮಗೊಳಿಸಿದರು.
shri devaki krishna wash point karki naka honavar contact; sachin mesta 9538529046,8310014860
Leave a Comment