ಬೆಂಗಳೂರು : ನಗರದ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಇರುವ ಬೆಂಗಳೂರು ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳ ಮಾದರಿಯಲ್ಲಿ ಹಳ್ಳಿಯಲ್ಲಿ ಗ್ರಾಮ ಒನ್ ಕೇಂದ್ರ ತೆರೆ ಯುವಯೋಜನೆಯನ್ನು 12 ಜಿಲ್ಲೆಗಳಲ್ಲಿ ಅನುಷ್ಟಾನಗೊಳಿಸಲು ಸರ್ಕಾರ ಸಿದ್ದತೆ ಮಾಡಿಕೊಳ್ಳುತ್ತಿದೆ.
ನಗರ ಪ್ರದೇಶಗಳಲ್ಲಿ ಕರ್ನಾಟಕ ಒನ್ ಮಾದರಿಯಲ್ಲಿ ನೀಡುತ್ತಿರುವ ಸೇವೆಯನ್ನು ಹಳ್ಳಿಗಳಿಗೂ ವಿಸ್ತರಿಸಲು ರಾಜ್ಯ ಸರ್ಕಾರವು ಮುಂದಾಗಿದ್ದು, ವಿದ್ಯುನ್ಮಾನ ನಾಗರಿಕ ಸೇವಾ ವಿತರಣೆ ನಿರ್ದೇಶನಾಲಯದಿಂದ ಗ್ರಾಮ ಒನ್ ಯೋಜನೆಯನ್ನು ರಾಜ್ಯದ 12 ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗುತಿದೆ.
ಒಳ್ಳಾರಿ, ಕೊಪ್ಪಳ, ವಿಜಯಪುರ, ಬೆಳಗಾವಿ, ಬೀದರ್, ದಾವಣಗೆರೆ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಉಡಪಿ ಜಿಲ್ಲೆಗಳಲ್ಲಿ ಫ್ರಾಂಚೈಸಿ ಆಧಾರದಲ್ಲಿ ಸೇವಾ ಕೇಂದ್ರ ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ.
ಈ ಕೇಂದ್ರಗಳ್ಲಿ ಸೇವಾಸಿಂಧು ಯೋಜನೆಯ 750 ಕ್ಕೂ ಹೆಚ್ಚು ನಾಗರಿಕ ಸೇವೆಗಳನ್ನು ಪಡೆಯಲು ಅರ್ಜಿ ಸ್ವೀಕರಿಸಲಿದ್ದು, ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಈ ಕೇಂದ್ರಗಳು ಕಾರ್ಯನಿರ್ವಹಿಸಲಿದೆ.
Leave a Comment