ಬೆಂಗಳೂರು : ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಯ 15 ಜಿಲ್ಲೆಗಳಲ್ಲಿ ಇನ್ನೊಂದು ಭಾರಿ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೆöÊ ಸುಳಿಗಾಳಿ ಪ್ರಭಾವ ದಿಂದಾಗಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಳಲ್ಲಿ ಭಾರೀ ಮಳೆಯಾಗುವ ಮನ್ಸೂಚನೆ ಇದೆ.
ಕರಾವಳಿ ಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈಗಾಗಲೇ ಮಳೆಯಾಗಬಹುದು ಎಂದು ತಿಳಿಸಲಾಗಿದೆ.
ಉತ್ತರದಲ್ಲಿ ಒಣ ಹವೆ : ಉತ್ತರ ಒಳನಾಡಿನ ಬಹುತೇಕ ಕಡೆ ಒಣ ಹವೆ ಮುಂದುವರೆಯಲಿದ್ದು, ಕೆಲವು ಕಡೆ ಮಾತ್ರ ಸುಧಾರಣ ಮಳೆಯಾಗಲಿದೆ. ನಂತರದ ದಿನಗಳಲ್ಲಿ ಮಳೆ ಪ್ರಮಾಣ ಇಳಿಮುಖವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Leave a Comment