ಶಿರಸಿ : ಐಸಿಐಸಿಐ ಬ್ಯಾಂಕ್ ಬೆಂಗಳೂರು, ಎಂ.ಇ.ಎಸ್ ವಾಣಿಜ್ಯ ಮಹಾವಿದ್ಯಾಲಯ ಶಿರಸಿ ಇವುಗಳ ಸಂಯುಕ್ತ ಆಶ್ರಯದಲ್ಲಿ ನ.15 ಸೋಮವಾರ ಮುಂಜಾನೆ 10 ಗಂಟೆಗೆ ಶಿರಸಿಯ ಎಂಇಎಸ್ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಬೃಹತ ಉದ್ಯೋಗ ಮೇಳ ಏರ್ಪಡಿಸಲಾಗಿದೆ.
ಐಸಿಐಸಿಐ ಬ್ಯಾಂಕ್ಗೆ ಪದವೀಧರ ಅಭ್ಯರ್ಥಿಗಳ ಅಗತ್ಯತೆ ಇದ್ದು, ಈ ಹಿನ್ನಲೆಯಲ್ಲಿ ಉದ್ಯೋಗ ಮೇಳ ಏರ್ಪಡಿಸಲಾಗಿದೆ. ಬಿ.ಎ, ಬಿ.ಎಸ್ಸಿ, ಬಿ.ಕಾಂ, ಸೇರಿದಂತೆ ಯಾವುದೇ ಪದವೀಧರರು ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳ ಬಹುದಾಗಿದ್ದು, ತಮ್ಮ ಶೈಕ್ಷಣಿಕ ಅರ್ಹತೆಯ ದಾಖಲೆಗಳು, ಎಡರು ಫೋಟೊಗಳನ್ನು ಅಭ್ಯರ್ಥಿಗಳು ತರುವುದು ಕಡ್ಡಾಯ ಎಂದು ಪ್ರಾಚಾರ್ಯ ಡಾ.ಟಿ.ಎಸ್. ಹಳೆಮನೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
job info; Join our whatsapp group
Leave a Comment