ಹೊನ್ನಾವರ : ಶರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ ಎನ್ನುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದೇ ತಡ ಕಂದಾಯ, ಗಣಿ ಮತ್ತು ಪೊಲೀಸ್ ಇಲಾಖೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ 12 ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಳೆಗಾಲದ ಕಾರಣಕ್ಕೆ ಸ್ಥಗಿತವಾಗಿದ್ದ ಮರಳುಗಾರಿಕೆಗೆ ಇದುವರೆಗೂ ಜಿಲ್ಲಾಡಳಿತ ಹಸಿರು ನಿಶಾನೆ ನೀಡಿರಲಿಲ್ಲವಾದರೂ ಜಿಲ್ಲೆಯಲ್ಲಿ ಮರಳು ತೆಗೆಯುವುದು ಮತ್ತು ಸಾಗಿಸುವ ಪ್ರಕ್ರಿಯೆ ನಿರಂತರ ಜಾರಿಯಲ್ಲಿರುವುದು ಗುಟ್ಟಾಗಿಯೇನು ಇರಲಿಲ್ಲ.
ಇದೀಗ ಕರಾವಳಿ ಭಾಗದಲ್ಲಿ ಅಕ್ರಮವಾಗಿ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ ಮೇಲಾಗಿ ಘಟ್ಟದ ಮೇಲಿನ ತಾಲೂಕುಗಳಿಗೆ ರಾತ್ರಿ ಸಮಯದಲ್ಲಿ ರಾಜಾ ರೋಷವಾಗಿ ಮರಳನ್ನು ಸಾಗಿಸುತ್ತಿದ್ದಾರೆ ಎನ್ನುವ ಬಗ್ಗೆ ಮಾಧ್ಯಮ ವರದಿಗಳ ಬೆನ್ನಲ್ಲಿಯೇ ನಡೆದ ದಿಡೀರ್ ದಾಳಿಯ ನೇತೃತ್ವವನ್ನು ಹೊನ್ನಾವರ ಸಿ.ಪಿ.ಐ ಶ್ರೀಧರ.ಎಸ್.ಆರ್ ವಹಿಸಿದ್ದರು. ಪಿ.ಎಸ್.ಶಶಿಕುಮಾರ್, ಪಿ.ಎಸ್.ಐಮಹಾಂತೇಶ, ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿ, ಕಂದಾಯ ನಿರೀಕ್ಷಕರು ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು ಎನ್ನಲಾಗಿದೆ.
shri devaki krishna wash point karki naka honavar contact; sachin mesta 9538529046,8310014860
Leave a Comment