ಕಾರವಾರ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2021-22 ನೇ ಸಾಲಿನ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಂದ ವಿದ್ಯಾಸಿರಿ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಮೆರಿಟ್ ಹೊಂದಿರುವ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ರೂ. 1500ರಂತೆ ಶೈಕ್ಷಣಿಕ ಅವಧಿ 6 ತಿಂಗಳಿಗೆ ಒಟ್ಟು ರೂ. 9000ಗಳನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು. ವಿದ್ಯಾರ್ಥಿನಿಲಯಗಳಿಗೆ ಮಂಜೂರಾದ ಸಂಖ್ಯಾ ಬಲಕ್ಕೆ ತಕ್ಕಂತೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳನ್ನು ಭರ್ತಿ ಮಾಡಿ ನಂತರದ ಹೆಚ್ಚುವರಿ ಅರ್ಜಿಗಳನ್ನು ಮಾತ್ರ ವಿದ್ಯಾಸಿರಿ ಯೋಜನೆಯಡಿಯಲ್ಲಿ ಪರಿಗಣಿಸಲಾಗುವುದು.
ನವೆಂಬರ್ 30 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, https://dom.karnataka.gov.in/ ವೆಬ್ ಸೈಟ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ಅರ್ಜಿಯೊಂದಿಗೆ ಎಲ್ಲಾ ದಾಖಲೆಗಳ ಧೃಢೀಕೃತ ಒಂದು ಪ್ರತಿಯನ್ನು ಆಯಾ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರವೀಣಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment