ಕಾರವಾರ:ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗೆ ಆರ್.ಡಿ.ಪಿ.ಆರ್. ಕ್ರೀಡಾಕೂಟ-2021 ವನ್ನು ಶಿರಸಿಯ ಮಾರಿಕಾಂಬಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಪಂ ಸಿಇಒ ಪ್ರಿಯಾಂಗಾ ಎಂ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಪ್ರಪಥಮ ಬಾರಿಗೆ ಆರ್.ಡಿ.ಪಿ.ಆರ್. ನೌಕರರ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿದ್ದು, ನ.20ರಂದುಬೆಳಗ್ಗೆ 9.30 ರಿಂದ ಸಂಜೆ 5.30 ರವರೆಗೆ ಕ್ರೀಡಾಕೂಟ ನಡೆಯಲಿದೆ.
ಈ ಕ್ರೀಡಾಕೂಟದಲ್ಲಿ ವಿವಿಧ ಪಂದ್ಯಾವಳಿಗಳನ್ನು ಆಯೋಜಿಸಲಾಗಿದೆ. ಪ್ರಮುಖವಾಗಿ 100 ಮೀ, 200 ಮೀ, 400 ಮೀ. ಓಟ, 4*100 ರೀಲೇ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಡಿಸ್ಕಸ್ ಥ್ರೋ, ಜಾವಲೀನ್ ಥ್ರೋ, ಟೇಬಲ್ ಟೆನ್ನಿಸ್, ಶೆಟಲ್ ಬ್ಯಾಡ್ಮಿಂಟನ್, ಚೆಸ್, ವಾಲಿಬಾಲ್, ಥ್ರೋಬಾಲ್, ಕೇರಂ ಮತ್ತು ಹಗ್ಗ ಜಗ್ಗಾಟದಂಥ ಪಂದ್ಯಗಳು ನಡೆಯಲಿವೆ.
ಕ್ರೀಡಾಕೂಟದಲ್ಲಿ ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ್, ಗ್ರಾಮ ಪಂಚಾಯತ್ , ಗ್ರಾಮೀಣ ಕುಡಿಯುವ ನೀರು, ಪಂಚಾಯತರಾಜ್ ಇಲಾಖೆಗಳ ಅಧಿಕಾರಿ/ಸಿಬ್ಬಂದಿ ಹಾಗೂ ಹೊರ ಗುತ್ತಿಗೆ ಸಿಬ್ಬಂದಿಯವರಿಗೆ ಸ್ಫರ್ಧೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ದೈಹಿಕ ಕ್ಷಮತೆ ಹೆಚ್ಚಿಸಲು ಈ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿದೆ.
ಇದೇ ಮೊದಲ ಬಾರಿಗೆ ಕ್ರೀಡಾಕೂಟ ಹಮ್ಮಿಕೊಂಡಿದ್ದರಿಂದ ಕ್ರಿಕೆಟ್ ಪಂದ್ಯ ಬಿಟ್ಟು ಉಳಿದೆಲ್ಲ ಪಂದ್ಯಗಳಲ್ಲಿ ಸಿಬ್ಬಂದಿಗಳಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನೂ ಆಯೋಜಿಸಲುಯೋಜನೆ ಹಾಕಿಕೊಳ್ಳಲಾಗಿದೆ.
ಪಂಚಾಯತ್ ಇಲಾಖೆ ಸಿಬ್ಬಂದಿ ಮತ್ತು ಬಾಹ್ಯಮೂಲ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಿಯಾಂಗಾ ಎಂ. ಎಂದರು.
Leave a Comment