ಕಾರವಾರ:ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಹೆಸರಿನ ಪಟ್ಟಿ ಶುಕ್ರವಾರ ರಾತ್ರಿ ಬಿಡುಗಡೆಯಾಗಿದೆ.

ಒಟ್ಟೂ 25 ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದರೂ ಕೇವಲ 20 ಕ್ಷೇತ್ರಗಳಿಗೆ ಮಾತ್ರ ಸ್ಪರ್ಧಿಸಲು ಬಿಜೆಪಿ ನಿರ್ಧರಿಸಿದ್ದು ಉತ್ತರ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಗಣಪತಿ ಉಳೇಕರ ಅವರು ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲೂ ಗಣಪತಿ ಉಳ್ವೇಕರ್ ಅಲ್ಪ ಮತಗಳಿಂದ ಸೋಲು ಕಂಡಿದ್ದರು.
Leave a Comment