ಹೊನ್ನಾವರ : ತುಳಸಿನಗರದ ವಾರ್ಡ್ ನಂಬರ್ 6 ರಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾದ ನಾಗರತ್ನ ಕೊನೇರಿ ಯಲ್ಲಾಪುರದಲ್ಲಿ ನಡೆದ ಜನಸ್ವರಾಜ ಸಮಾವೇಶದಲ್ಲಿ ಬಿಜೆಪಿ ತತ್ವ ಸಿದ್ದಾಂತ ಒಪ್ಪಿ ಪಕ್ಷಕ್ಕೆ ಸೆರ್ಪೆಡೆಯಾದರು.
2 ವಾರ್ಡ್ಗಳಲ್ಲಿ ಪ್ರಥಮ ಬಾರಿಗೆ ಪಟ್ಟಣ ಪಂಚಾಯತದಲ್ಲಿದಾಖಲೆ 12 ಸ್ಥಾನದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ ದಾಖಲೆಬರೆದಿದ್ದರು. ಕಾಂಗ್ರೆಸ್ ಒಂದು, ಜೆಡಿಎಸ್ ಎರಡು ಸ್ಥಾನ ಗಳಿಸಿದರೆ ಉಳಿದೆಡೆ ಪಕ್ಷೇತರ ಅಭ್ಯರ್ಥಿಗಳು ಆಯ್ಕೆ ಆಗಿದ್ದರು.

ಇದೀಗ ಪಕ್ಷೇತರವಾಗಿ ಆಯ್ಕೆಯಾದ ನಾಗರತ್ನ ಕೊನೇರಿ ಬಿಜೆಪಿಯತ್ತ ಮುಖ ಮಾಡಿದ್ದಾರೆ. ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಹಾಗೂ ಸಚಿವ ಶಿವರಾಮ ಹೆಬ್ಬಾರ ಪಕ್ಷದ ಶಾಲು ಹೊದಿಸಿ ಭಾರತೀಯ ಜನತಾ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಸಚಿವರಾದ ಬಿ.ಶ್ರೀರಾಮುಲು, ಬಿಜೆಪಿ ರಾಜ್ಯ ಪ್ರಧಾನಕಾರ್ಯದರ್ಶಿ ಎನ್. ರವಿಕುಮಾರ್. ರಾಜ್ಯ ಉಪಾಧ್ಯಕ್ಷ ಎಸ್.ನಂದೀಶ್, ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ಶಾಸಕರಾದ, ದಿನಕರ ಶೆಟ್ಟಿ ಸುನೀಲ ನಾಯ್ಕ, ರೂಪಾಲಿ ನಾಯ್ಕ, ವಿಧಾನಪರಿಷತ್ ಸದಸ್ಯರಾದ ಶಾಂತಾರಾಮ ಸಿದ್ದಿ ಹಾಗೂ ಪಕ್ಷದ ಪದಾಧಿಕಾರಿಗಳು ನಿಗಮ ಮಂಡಳಿಯ ಅಧ್ಯಕ್ಷರು, ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.
Leave a Comment