ಕಾರವಾರ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಾಜ್ಯ ಸಂಪನ್ಮೂಲ ಕೇಂದ್ರ ಯೋಜನೆಯಲ್ಲಿ ನಡೆಯುತ್ತಿರುವ ಮಹಿಳಾ ಸ್ವಉದ್ಯೋಗ ಮಾರ್ಗದರ್ಶನ ಕೇಂದ್ರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಲು ಆಸಕ್ತ ಮಹಿಳಾ ಅಭ್ಯರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಮಾರ್ಗದರ್ಶನ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು ಸಂಪನ್ಮೂಲ ವ್ಯಕ್ತಿಯನ್ನು 3 ತಿಂಗಳ ಅವಧಿ ಹಾಗೂ ಗೌರವಧನ ಆಧಾರದ ಮೇಲೆ ನೇಮಿಸಿಕೊಳ್ಳಲಾಗುತ್ತಿದ್ದು, ಅರ್ಜಿದಾರರು ಎಂಎಸ್ಡಬ್ಲೂö್ಯ ಅಥವಾ ಎಂ.ಎ ಮಹಿಳಾ ಅಧ್ಯಯನ ಅಥವಾ ಸೋಶಿಯಾಲಜಿ ಇವುಗಳಲ್ಲಿ ಯಾವುದಾದರು ಒಂದರಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ಅಭ್ಯರ್ಥಿಯು ಮಹಿಳಾ ಅಭಿವೃಧ್ಧಿ ಕ್ಷೇತ್ರದಲ್ಲಿ ಕನಿಷ್ಠ 3 ರಿಂದ 5 ವರ್ಷಗಳ ಅನೂಭವ (ಕಡ್ಡಾಯವಾಗಿ ಅನುಭವ ಪ್ರಮಾಣ ಪತ್ರ ಸಲ್ಲಿಸುವುದು) ಹೊಂದಿರಬೇಕು.
ಅಭ್ಯರ್ಥಿಯು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಪ್ರವಾಸ ಕೈಗೊಳ್ಳಲು ದೈಹಿಕವಾಗಿ ಸಾಮರ್ಥ ಹೊಂದಿರಬೇಕು. ವಯೋಮಿತಿ 21 ರಿಂದ 50 ವರ್ಷದೊಳಗಿರಬೇಕು. ಆಸಕ್ತಿಯುಳ್ಳ ಮಹಿಳಾ ಅಭ್ಯರ್ಥಿಗಳು ತಮ್ಮ ಸ್ವ- ವಿವರ (ಬಯೋಡಾಟಾ). ಒಪ್ಪಿಗೆ ಪತ್ರ ಹಾಗೂ ಸೂಕ್ತ ದಾಖಲೆ ಪತ್ರಗಳೊಂದಿಗೆ ಅರ್ಜಿಯನ್ನು ನ.30 ರೊಳಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ. ರಿಮಾಂಡ್ ರೂಮ್ ಕಂಪೌಡ್, ಡಾ.ಕಮಲಾಕರ ರೋಡ್, ಕಾರವಾರ ಕಚೇರಿಗೆ ಸಲ್ಲಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ.ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment