ಅಂಕೋಲಾ : ಜಿಲ್ಲಾ ಹಾಲಕ್ಕಿ ಒಕ್ಕಲಿಗರ ಸಂಘದಿAದ 2021-22 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸಾಧನೆ ಮಾಡಿದ ಹಾಲಕ್ಕಿ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರ ಅರ್ಜಿ ಆಹ್ವಾನಿಸಿದ್ದಾರೆ.
ಎಸ್ ಎಸ್ ಎಲ್ ಸಿ. ದ್ವಿತೀಯ ಪಿಯುಸಿಯಲ್ಲಿ ಕಲಾ, ವಾಣಿಜ್ಯ, ವಿಜ್ಞಾನ ಮತ್ತು ಪದವಿಯಲ್ಲಿ ಕಲಾ, ವಿಜ್ಞಾನ, ವಾಣಿಜ್ಯ ವಿಭಾಗದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳು ಅರ್ಜಿ ಹಾಕಬಹುದು. 2021-22ನೇ ಸಾಲಿನಲ್ಲಿ ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳು ಅರ್ಜಿಯನ್ನು ಹಾಕಬಹುದು.
ವಿದ್ಯಾರ್ಥಿಗಳು ಅರ್ಜಿ ಹಾಕುವಾಗ ತಮ್ಮ ಅಂಕಪಟ್ಟಿ ಹಾಗೂ ಜಾತಿ ಪ್ರಮಾಣಪತ್ರವನ್ನು ದೃಢೀಕರಿಸಿ ಡಿಸೆಂಬರ್ 20ರೊಳಗೆ ಕಳುಹಿಸಬೇಕು. ಅರ್ಜಿಯನ್ನು ಹನುಮಂಯ ಬಿ.ಗೌಡ ಅಧ್ಯಕ್ಷರು ಜಿಲ್ಲಾ ಹಾಲಕ್ಕಿ ಒಕ್ಕಲಿಗರ ಸಂಘ, ಶಿರಕುಳಿ, ಅಂಕೋಲಾ – 581 314, ಮೊ ಸಂ : 94800 33086, 81977 35602 ಗೆ ಸಂಪರ್ಕಿಸಲು ಕೋರಿದ್ದಾರೆ.
Leave a Comment