ಕಾರವಾರ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ನಿಯಮಿತದಿಂದ 2021 – 22 ನೇ ಸಾಲಿನ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ, ಜೈನ್, ಸಿಖ್, ಬೌದ್ಧ ಹಾಗೂ ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಅರಿವು ರಿನ್ಯೂವಲ್ ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಧಿಕಾರದಿಂದ ಸಿಇಟಿ/ನೀಟ್ನಲ್ಲಿ ಆಯ್ಕೆಯಾದ ವೈದ್ಯಕೀಯ ಹಾಗೂ ಬಿಡಿಎಸ್, ಬಿಇ/ಬಿಟಿಕ್, ಬ್ಯಾಚುರಲ್ ಆಫ್ ಆರ್ಕಿಟೆಕ್ಚರ್ ಮತ್ತು ಆಯುಷ್ ನಂತಹ ಪದವಿ ಕೋರ್ಸ್ಗಳಲ್ಲಿ ಆಯ್ಕೆಯಾಗಿ, ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ನಿಗಮದ ವೆಬ್ ಸೈಟ್ ನಲ್ಲಿ ಆನ್ ಲೈನ್ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 20 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಜಿಲ್ಲಾವ್ಯವಸ್ಥಾಪಕರ ಕಛೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ವಾಸೀಂ ಮಂಜಿಲ್, 1ನೇ ಮಹಡಿ, ಹೈಚರ್ಚ್ ರಸ್ತೆ. ಕಾರವಾರ, ದೂರವಾಣಿ ಸಂಖ್ಯೆ : 08382 – 221 180 ಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment