
ಯಲ್ಲಾಪುರ : ವಿಧಾನಪರಿಷತ ಚುನಾವಣೆಯ ಬಿಜೆಪಿ ಯ ಗೆಲವು ಮುಂದಿನ ತಾಲೂಕಾ ಹಾಗೂ ಜಿಲ್ಲಾಪಂಚಾಯತ ಚುನಾವಣೆ ಮುನ್ನುಡಿಯನ್ನು ಬರೆಯಲಿದೆ,ಎಂದುಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳ ವಿಧಾನಪರಿಷತ ಚುನಾವಣೆ ಅಂಗವಾಗಿ ಇಡಗುಂದಿ ಹಾಗೂ ಪಟ್ಟಣದ ಅಡಿಕೆ ಭವನದಲ್ಲಿ ಜನಪ್ರತಿನಿಧಿಗಳ ಸಭೆ ಯಲ್ಲಿ ಮಾತನಾಡಿ
ನಾವೆಲ್ಲರೂ ಒಟ್ಟಾಗಿ ಅಭ್ಯರ್ಥಿಗಣಪತಿ ಉಳ್ವೇಕರ್ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಅತ್ಯಧಿಕ ಮತಗಳಿಂದ ಆಯ್ಕೆ ಮಾಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್.ಗಾಂವ್ಕರ್, ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷ ಪ್ರಮೋದ ಹೆಗಡೆ, ಅಭ್ಯರ್ಥಿ ಗಣಪತಿ ಉಳ್ವೇಕರ್, ಜಿಲ್ಲಾ ಉಪಾಧ್ಯಕ್ಷ ಉಮೇಶ್ ಭಾಗ್ವತ್, ಜಿಲ್ಲಾ ಮಾಧ್ಯಮ ವಕ್ತಾರ ನಾಗರಾಜ ನಾಯಕ,
ಪಟ್ಟಣ ಪಂಚಾಯತಿ ಅಧ್ಯಕ್ಷೆ ಸುನಂದಾ ದಾಸ್, ಉಪಾಧ್ಯಕ್ಷೆ ಶ್ಯಾಮಿಲಿ ಪಾಠಣಕರ್, ಪ್ರಮುಖರಾದ ವಿಜಯ ಮಿರಾಶಿ, ರೇಖಾ ಹೆಗಡೆ,ಹಾಗೂ ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು, ಉಪಸ್ಥಿತರಿದ್ದರು.
Leave a Comment