ಬೆಂಗಳೂರು : ಕೊವಿಡ್ ಸೋಂಕಿನಿAದ ಬಿಪಿಎಲ್ ಕುಟುಂಬಗಳಲ್ಲಿ ಯಾರೇ ಮೃತಪಟ್ಟರೂ 1 ಲಕ್ಷ ರೂ. ಪರಿಹಾರ ನೀಡಲು ರಾಜ್ಯ ಸರ್ಕಾರ ಆದೇಶಿಸಿದೆ.
ಕೊರೊನಾದಿಂದ ಮೃತಪಟ್ಟ ಬಡವರ ಕುಟುಂಬಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಹಿಂದೆ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಒಬ್ಬ ದುಡಿಯುವ ವ್ಯಕ್ತಿಗೆ ಮಾತ್ರ ಪರಿಹಾರ ನೀಡುವುದಾಗಿ ಈ ಮೊದಲ ತಿಳಿಸಿತ್ತು.
ಇದೀಗ ಈ ನಿಯಮಕ್ಕೆ ಬದಲಾವಣೆ ತರಲಾಗಿದ್ದು, ಬಿಪಿಎಲ್ ಕುಟುಂಬದ ಯಾವುದೇ ವ್ಯಕ್ತಿ ಕೊರೊನಾದಿಂದ ಮೃತರಾಗಿದ್ದರೂ ಅವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದೆ. ಇವರೊಂದಿಗೆ ದುಡಿಯುತ್ತಿದ್ದ ವ್ಯಕ್ತಿಯ ಸಾವಿಗೆ ಮಾತ್ರ ಪರಿಹಾರ ಎಂಬ ನಿಂಬಧನೆಯನ್ನು ತೆಗೆದು ಹಾಕಲಾಗಿದ್ದು, ಇದೀಗ ಬಿಪಿಎಲ್ ಕುಟುಂಬದ ಯಾವುದೇ ಸದಸ್ಯ ಕೊರಿನಾದಿಂದ ಮೃತರಾಗಿದ್ದರೂ 1 ಲಕ್ಷ ರೂ. ಪರಿಹಾರ ನೀಡಲಾಗುವುದು ಪರಿಹಾರ ನೀಡಲು ಕೋವಿಡ್ನಿಂದ ಮೃತಪಟ್ಟ ವ್ಯಕ್ತಿಯ ವಯಸ್ಸಿನ ನಿಬಂಧನೆಯೂ ಇಲ್ಲ ಎಂದು ರಾಜ್ಯ ಸರ್ಕಾರ ಹೊಸದಾಗಿ ಆದೇಶ ಹೊರಡಿಸಿದೆ.
Leave a Comment