ಕೋಹಿಮಾ: ಬಂಡುಕೋರರ ವಿರುದ್ಧದ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 13 ಮಂದಿ ಮೃತಪಟ್ಟ ಘಟನೆ ನಾಗಾಲ್ಯಾಂಡ್ನ ಮೋನ್ ಜಿಲ್ಲೆಯ ಆಟಿಂಗ್ನಲ್ಲಿ ಶನಿವಾರ ರಾತ್ರಿ ನಡೆದಿದೆ. ಟ್ರಕ್ಕೊಂದರ ಮೇಲೆ ಭದ್ರತಾ ಪಡೆಯು ಗುಂಡಿನ ದಾಳಿ ನಡೆಸಿತ್ತು. ಇದನ್ನು ಪ್ರತಿಭಟಿಸಿ ಸ್ಥಳದಲ್ಲಿ ಜಮಾಯಿಸಿದ್ದ ಜನರ ಗುಂಪಿನ ಮೇಲೆಯೂ ಗುಂಡಿನ ದಾಳಿ ನಡೆಸಲಾಯಿತು ಎಂದು ಪೆÇಲೀಸರು ತಿಳಿಸಿದ್ದಾರೆ.
ಮೋನ್ ಜಿಲ್ಲೆಯು ಮ್ಯಾನ್ಮಾರ್ ಜತೆ ಗಡಿ ಹೊಂದಿದೆ. ನಾಗಾಲ್ಯಾಂಡ್ನ ಮೋನ್ ಜಿಲ್ಲೆಯ ಆಟಿಂಗ್ನಲ್ಲಿ ನಡೆದಿರುವ ಘಟನೆ ದುರದೃಷ್ಟಕರ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಘಟನೆ ಬಗ್ಗೆ ಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರವು ರಚಿಸಿರುವ ಉನ್ನತ ಮಟ್ಟದ ಎಸ್ಐಟಿಯು ಘಟನೆ ಬಗ್ಗೆ ವಿವರವಾಗಿ ತನಿಖೆ ನಡೆಸಲಿದ್ದು, ನ್ಯಾಯ ಒದಗಿಸಿಕೊಡಲಿದೆ ಎಂದು ಉಲ್ಲೇಖಿಸಿದ್ದಾ ರೆ.
Leave a Comment