ಉತ್ತರ ಕನ್ನಡ ಜಿಲ್ಲೆಯ ನಾಲ್ಕು ವಿಭಾಗದಲ್ಲಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಕಳ್ಳತನ, ದರೋಡೆ ಹಾಗೂ ವಂಚನೆ ಪ್ರಕರಣದಲ್ಲಿ ಕಳ್ಳರಿಂದ ವಶಕ್ಕೆ ಪಡೆದ ಸುಮಾರು 75 ಲಕ್ಷ ರೂ. ಸ್ವತ್ತುಗಳನ್ನು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸಂಬಂಧಪಟ್ಟರಿಗೆ ಮರಳಿಸುವ ಕಾರ್ಯಕ್ರಮ ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆಯಿತು.
ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ ನಡೆದ 204 ದರೋಡೆ, ಸುಲಿಗೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆ ಪೊಲೀಸರು 98 ಪ್ರಕರಣ ಭೇದಿಸಿ 75 ಲಕ್ಷ ರೂ. ಮೌಲ್ಯದ ಸ್ವತ್ತನ್ನು ಪತ್ತೆ ಮಾಡಿದ್ದಾರೆ. ದಾಖಲಾದ ಪ್ರಕರಣದ ಪೈಕಿ ಶೇ.50ಕ್ಕೂ ಹೆಚ್ಚು ಪ್ರಕರಣವನ್ನು ವಿವಿಧ ವಿಭಾಗದ ಪೊಲೀಸರು ಭೇದಿಸಿದ್ದಾರೆ.





ವಿವಿಧ ಸ್ವತ್ತುಗಳನ್ನು ಮಾಲೀಕರಿಗೆ ವಾಪಸ್ ನೀಡುವ ಕಾರ್ಯಕ್ರಮದ ಸಂದರ್ಭದಲ್ಲಿ ಮಾತನಾಡಿದ ಎಸ್ಪಿ ಸುಮನ್ ಪೆನ್ನೇಕರ್ ಮಾತನಾಡಿ ಜಿಲ್ಲೆಯಲ್ಲಿ 204 ಪ್ರಕರಣಗಳಲ್ಲಿ 98 ಪ್ರಕರಣ ಭೇದಿಸಲಾಗಿದೆ. ಉಳಿದವುಗಳನ್ನು ಶೀಘ್ರದಲ್ಲಿ ಭೇದಿಸುತ್ತೇವೆ. ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ 18 ಕೊಲೆ ಪ್ರಕರಣ ನಡೆದಿದೆ.
ಅದೆಲ್ಲವನ್ನು ಭೇದಿಸಲಾಗಿದೆ. ವಶಕ್ಕೆ ಪಡೆದುಕೊಂಡು ಪ್ರಕರಣಗಳಲ್ಲಿ ಮುಂಡಗೋಡದಲ್ಲಿ ನಡೆದ ದರೋಡೆ ಪ್ರಕರಣ, ಅಸ್ತಿ ಪಂಚರ ದೊರೆತ ಪ್ರಕರಣ ಸಹ ಸೇರಿದೆ ಎಂದರು. ಈ ವರ್ಷ ಮುಂಡಗೋಡದಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಒಟ್ಟೂ 22.50 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಪ್ರಸಕ್ತ ಸಾಲಿನಲ್ಲಿ ಗೋಕರ್ಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳವು ಪ್ರಕರಣದಲ್ಲಿ ಏಳು ಆರೋಪಿಗಳನ್ನು ಬಂಧಿಸಲಾಗಿದೆ. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಒಟ್ಟು 18 ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ. ಸುಮಾರು 12 ಲಕ್ಷ ಮೌಲ್ಯದ ಸ್ವತ್ತುಗಳನ್ನು ಜಪ್ತಿ ಮಾಡಲಾಗಿದೆ. 12 ವಾಹನ ಕಳವು, 21 ಸಾದಾ ಕಳವು ಪ್ರಕರಣಗಳನ್ನೂ ಪತ್ತೆ ಹಚ್ಚಲಾಗಿದೆ.
Leave a Comment