ಕಾರವಾರ:ನೇಣು ಬಿಗಿದುಕೊಂಡು ಪೊಲೀಸ್ ಪೇದೆಯೊಬ್ಬ ಆತ್ಮಹತ್ಯೆ ಕಾರವಾರದ ಡಿ.ಆರ್ ಕಚೇರಿಯಲ್ಲಿ ಬುಧವಾರ ನಡೆದಿದೆ. ಗುರುಪ್ರಸಾದ್ ನಾಯ್ಕ್ (35) ಆತ್ಮಹತ್ಯೆ ಮಾಡಿಕೊಂಡ ಪೇದೆ. ಕಚೇರಿ ಕೆಲಸಕ್ಕಾಗಿ ಆಗಮಿಸಿ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜಿಲ್ಲೆಯ ಹೊನ್ನಾವರ ತಾಲೂಕಿನ ಹಳದಿಪುರ ನಿವಾಸಿಯಾಗಿದ್ದಾನೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದು ಕಾರವಾರ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Leave a Comment