• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕನ್ನಡಧ್ವಜ ಸುಟ್ಟ ಪ್ರಕರಣ:ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಜಯ ಕರ್ನಾಟಕ ಸಂಘಟನೆಯಿಂದ ಮನವಿ

December 21, 2021 by Jayaraj Govi Leave a Comment

1640109389467

ಯಲ್ಲಾಪುರ :  ಕನ್ನಡಧ್ವಜ ಸುಟ್ಟ ಪ್ರಕರಣ ಹಾಗೂ ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಗಡಿಪಾರು ಶಿಕ್ಷೆ ನೀಡಬೇಕೆಂದು ಜಯ ಕರ್ನಾಟಕ ಸಂಘಟನೆ ತಾಲೂಕಾ, ಗ್ರಾಮೀಣ ಘಟಕದ ವತಿಯಿಂದ ಮಂಗಳವಾರ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು . ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜವನ್ನು ಸುಟ್ಟು ಹಾಕಿದ್ದು ಕಿಡಿಗೇಡಿಗಳ ವಿಕೃತ ಮನಸ್ಥಿತಿಯನ್ನು ತೋರಿಸುತ್ತದೆ. ಅಲ್ಲದೇ ಬೆಳಗಾವಿ ಜಿಲ್ಲೆಯ ಪಿರಾಡಿ ಗ್ರಾಮದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಮೂರ್ತಿಗೆ ಅವಮಾನ ಮಾಡಿರುವುದು, ಅವರ ಕುಲ್ಲಕ ಮನೋಭಾವನೆಯನ್ನು ಸೂಚಿಸುತ್ತದೆ. ಆದರೆ ಅದನ್ನು ಸಹಿಸಿಕೊಂಡು ಹೋಗುವಷ್ಟು ಸಹನೆ ನಮಗಿಲ್ಲ, ಆದ್ದರಿಂದ ಕೂಡಲೇ ಈ ನಾಡದ್ರೋಹಿ ಕುಕೃತ್ಯವನ್ನು ಮಾಡಿದ ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು, ಅಲ್ಲದೆ ಎಂ.ಇ.ಎಸ್ ಸಂಘಟನೆಯನ್ನು ಕೂಡಲೇ ಕರ್ನಾಟಕದಲ್ಲಿ ನಿಷೇಧಿಸಬೇಕೆಂದು  ಎಂದುಮನವಿಯಲ್ಲಿ ಒತ್ತಾಯಿಸಲಾಗಿದೆ . ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕಾ ಅಧ್ಯಕ್ಷವಿಲ್ಸನ್ ಆರ್. ಫರ್ನಾಂಡಿಸ್, ನಗರ ಘಟಕದ ಅಧ್ಯಕ್ಷ ಕೆ.ಎಫ್.ಕಂಬೆಳೆನ್ನವರ, ತಾಲೂಕಾ ಸಲಹೆಗಾರ ದತ್ತಾತ್ರೇಯ ಹೇಂದ್ರೆ, ತಾಲೂಕಾ ಮಹಿಳಾ ಅಧ್ಯಕ್ಷೆ ಸುಮಂಗಲಾ ಹನುಮರೆಡ್ಡಿ, ಉಪಾದ್ಯಕ್ಷೆ ಗೀತಾ ಕವಳಿ, ಕಿರವತ್ತಿ ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ ನಾಯ್ಕ, ಮಹೇಶ ನಾಯ್ಕ, ಮೆಹಬೂಬ ಅಲಿ ಬಮ್ಮಿಗಟ್ಟಿ, ರಾಜಾರಾಮ ಯಾದವ, ಅಲೆಕ್ಸ್ ಸಿದ್ದಿ, ವಿಜಯ ಸಿದ್ದಿ, ರೇಣುಕಾ ರಂಜಿತ ಜಾದವ, ಮಂಜು ರಾಯ್ಕರ, ಪರಶುರಾಮ ಹರಿಜನ, ಸೋಮ ಭೋವಿವಡ್ಡರ, ಈರಯ್ಯ ಕಲ್ಮಠ, ಸಾಧಿಕ್ ಖಾಜಿ, ಹನೀಫ್ ಶೇಖ, ರಜಾಕ್ ಶೇಖ, ಸಲೀಮ್ ರಿಯಾಝ್, ಅಲಿ ಖರೇಷಿ, ಜಾವು ಪಟಕಾರ, ಬಕ್ಕು, ಬಾಬು ಪಾಟೀಲ, ಮತ್ತಿತರರು ಉಪಸ್ಥಿತರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Other, Yellapur

Explore More:

About Jayaraj Govi

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...