
ಯಲ್ಲಾಪುರ : ಕಾರ್ಮಿಕ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಯಾದ ” ಶ್ರಮಿಕ ಸಂಜೀವಿನಿ ” ಸಂಚಾರಿ ಕ್ಲಿನಿಕ್ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ಜೊತೆಗೂಡಿ ಉದ್ಘಾಟಿಸಿಸುವ ಮೂಲಕವಾಗಿ ನಾಡಿನ ಶ್ರಮಿಕ ವರ್ಗದ ಸೇವೆಗೆ ಸಮರ್ಪಿಸಿದರು.ನಂತರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ “ಕಾರ್ಮಿಕ ಇಲಾಖೆ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದು, ರಾಜ್ಯದ 9 ಕಡೆಗಳಲ್ಲಿ ಕಾರ್ಮಿಕ ಭವನವನ್ನು ನಿರ್ಮಿಸಿ, ಕಾರ್ಮಿಕರಿಗೆ ಬೇಕಾದ ಸಕಲ ಅನುಕೂಲಗಳನ್ನು ಒಂದೇ ಸೂರಿನಡಿ ಒದಗಿಸುತ್ತಿದೆ. ಕಾರ್ಮಿಕರ ನೆರವಿಗೆ ಎಲ್ಲ ಸವಲತ್ತುಗಳಿರುವ ಆಂಬ್ಯುಲೆನ್ಸ್ ಅನ್ನು ಕೂಡ ಇಂದು ಲೋಕಾರ್ಪಣೆ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಸಚಿವರಾದ ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ಆನಂದ ಸಿಂಗ್ , ಶಂಕರ ಪಾಟೀಲ್ ಮುನೇನಕೊಪ್ಪ ಹಾಗೂ ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿಗಳು, ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Leave a Comment