ಯಲ್ಲಾಪುರ : ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಸೋಮವಾರ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕಾಕರಣ ಅಭಿಯಾನಕ್ಕೆ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ
ಅವರು, ಉತ್ತರಕನ್ನಡ ಜಿಲ್ಲೆಯಾದ್ಯಂತ 15 ರಿಂದ 18 ವರ್ಷದೊಳಗಿನ 70 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ, ಕೋವಿಡ್ ಮುಕ್ತ ಸಮಾಜ ನಿರ್ಮಾಣ ಮಾಡುವುದೆ ನಮ್ಮ ಸರಕಾರದ ಮೂಲಭೂತ ಉದ್ದೇಶವಾಗಿದೆ.
ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟರಿಗೆ ಮೊದಲನೇ ಡೊಸ್ 98 % ಹಾಗೂ ಎರಡನೇ ಡೊಸ್ ಅನ್ನು 87 % ನೀಡುವ ಮೂಲಕ ಜಿಲ್ಲೆ ರಾಜ್ಯದಲ್ಲಿಯೇ ಮೂರನೇ ಸ್ಥಾನದಲ್ಲಿದೆ.ವಿದ್ಯಾರ್ಥಿಗಳಿಗೆ ಶಾಲೆಯಲ್ಲಿಯೇ ಲಸಿಕೆಯನ್ನು ಉಚಿತವಾಗಿ ನೀಡುವ ವ್ಯವಸ್ಥೆ ಸರಕಾರ ಹಮ್ಮಿಕೊಂಡಿದೆ ಕೋವಿಡ್ 19 ನಿಂದ ತಮ್ಮ ಮಕ್ಕಳನ್ನು ರಕ್ಷಿಸಲು ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳುವಂತೆ ಪಾಲಕರು ಮಕ್ಕಳಿಗೆ ಪ್ರೋತ್ಸಾಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷರಾದ ಸುನಂದಾ ದಾಸ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶರದ್ ನಾಯಕ, ತಾಲೂಕಾ ಆರೋಗ್ಯ ಅಧಿಕಾರಿ ಡಾ.ನರೇಂದ್ರ ಪವಾರ, ಪ್ರಮುಖರಾದ ವಿಜಯ ಮಿರಾಶಿ ಹಾಗೂ ಕಾಲೇಜ ಪ್ರಾಂಶುಪಾಲರು, ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
Leave a Comment