ಹೊನ್ನಾವರ : ತಾಲೂಕಿನ ಕಾಸರಕೋಡ್ ಸಮೀಪ ರಸ್ತೆಗೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಜಕಕ್ಕೆ ಢಿಕ್ಕಿಯಾದ ಘಟನೆ ನಡೆದಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಷ್ಟಿçÃಯ ಹೆದ್ದಾರಿ 66ರಲ್ಲಿ ಭಟ್ಕಳ ಕಡೆಯಿಂದ ಹೊನ್ನಾವರ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಕಾರ್ ಚಲಾಯಿಸಿಕೊಂಡು ಬಂದವನು ಕಾಸರಕೋಡ ಇಕೋ ಬೀಚ್ ಕ್ರಾಸ್ ಹತ್ತಿರ ರಸ್ತೆಗೆ ಅಡ್ಡಲಾಗಿ ಬಂದ ದನವೊಂದನ್ನು ತಪ್ಪಿಸಲು ಹೋಗಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತ ಪಡಿಸಿದ್ದಾನೆ.
ಆರೋಪಿತ ಚಾಲಕ ಚಿತ್ರದುರ್ಗ ಜಿಲ್ಲೆಯ ನೆಹರು ನಗರದ ಶಶಿಕುಮಾರ ಎಂದು ಗುರುತಿಸಲಾಗಿದ್ದು, ಈತನಿಗೂ ಪೆಟ್ಟಾಗಿದೆ. ಕಾರಿನಲ್ಲಿದ್ದ ಮಂಡ್ಯ ಜಿಲ್ಲೆಯ ಧೀರಜ್‌ಕುಮಾರ್, ಚಿತ್ರದುರ್ಗ ಜಿಲ್ಲೆಯ ನೆಹರು ನಗರದ ರಾಘವೆಂದ್ರ, ಶ್ರೀನಿವಾಸ ಎನ್ನುವವರು ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.
ಘಟನೆಯಲ್ಲಿಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಶೀಲನೆ ನಡೆಸಿ ಸುಗಮ ಸಂಚಾರಕ್ಕೆ ಅನುಮ ಮಾಡಿಕೊಟ್ಟಿದ್ದಾರೆ.
Leave a Comment