ಭಟ್ಕಳ ತಾಲೂಕಿನ ಹಳೆಯ ಸಹಾಯಕ ಆಯುಕ್ತರ ಕಚೇರಿಯ ಹಿಂಬಾಗದ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದರೆ.

ರವಿವಾರ ಸಂಜೆ ವೇಳೆಗೆ ಗುಡ್ಡಕ್ಕೆ ಬೆಂಕಿ ತಗುಲಿದ್ದು ಅದನ್ನು ಗಮನಿಸಿದ ಅಲ್ಲಿನ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಗಾಳಿಯಿಂದಾಗಿ ಬೆಂಕಿ ಕೆನ್ನಾಳಿಗೆ ವ್ಯಾಪಿಸಿದರಿಂದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬರುವವರೆಗೆ ಬೆಂಕಿ ನಂದಿಸಲು ಸತತ ಪ್ರಯತ್ನ ನಡೆಸಿದ್ದಾರೆ. ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಸುತ್ತಲೂ ವ್ಯಾಪಿಸಿದ್ದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿ ಯಾಗಿದ್ದರೆ.

ಈ ಆಕಸ್ಮಿಕವಾಗಿ ಬೆಂಕಿ ಅವಘಡದಿಂದ ಯಾವುದೇ ಅನಾಹುತ ಸಂಭವಿಸಿಲ್ಲವಾಗಿದೆ
Leave a Comment