ಕುಮಟಾ : ಯುವತಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗೋಕರ್ಣದ ರುದ್ರಪಾದಲ್ಲಿ ನಡೆದಿದೆ.
ಕುಮಟಾ ತಾಲೂಕಿನ ರುದ್ರಪಾದ ನಿವಾಸಿ ಕವಿತಾ ದೇವು ಗೌಡ (20) ಯಾವುದೋ ಕಾರಣಕ್ಕೆ ಮಾನಸಿಕವಾಗಿ ನೊಂದು ಕೀಟನಾಶಕ ಸೇವನೆ ಮಾಡಿ ಅಸ್ವಸ್ಥಳಾಗಿದ್ದಳು ಕೂಡಲೇ 108 ಅಂಬ್ಯಲೆನ್ಸ್ ಸ್ಥಳಕ್ಕೆ ತೆರಳಿ ಆಕೆಯನ್ನು ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದ ಸಿಬ್ಬಂದಿಗಳು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕುಮಟಾ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ
Leave a Comment