
ಯಲ್ಲಾಪುರ, : ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಪಟ್ಟಣದ ಕಾಳಮ್ಮನಗರದ ತಾಲೂಕಾ ಕ್ರೀಡಾಂಗಣದಲ್ಲಿ, ಯುವ ಮೋರ್ಚಾ ಯಲ್ಲಾಪುರ ಹಾಗೂ ಗ್ರಾಮದೇವಿ ಸ್ಪೋರ್ಟ್ಸ್ ಕ್ಲಬ್ ಕಿರವತ್ತಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ” ಕಮಲ ಟ್ರೋಫಿ ” ತಾಲೂಕಾ ಮಟ್ಟದ ಲೇದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ, ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್. ಗಾಂವ್ಕರ್, ಪ್ರಧಾನ ಕಾರ್ಯದರ್ಶಿ ಪ್ರಸಾದ ಹೆಗಡೆ, ಯುವ ಮೋರ್ಚಾ ಅಧ್ಯಕ್ಷರಾದ ಪ್ರದೀಪ ಯಲ್ಲಾಪುರಕರ್, ಪ.ಪಂ ಅಧ್ಯಕ್ಷೆ ಸುನಂದಾ ದಾಸ್, ಮಹಿಳಾ ಮೋರ್ಚಾ ಅಧ್ಯಕ್ಷೆ ಶೃತಿ ಹಗೆಡೆ ಪ್ರಮುಖರಾದ ಶ ಪ್ರಮೋದ್ ಹೆಗಡೆ,ಮುರಳಿ ಹೆಗಡೆ, ನಾಗರಾಜ ಕವಡಿಕೆರೆ, ಎಸ್.ಟಿ.ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ ತಳವಾರ ಹಾಗೂ ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.
Leave a Comment