ಕಾರವಾರ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯ ವತಿಯಿಂದ ಉಚಿತ 10 ದಿನಗಳ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿಯನ್ನು ಫೆಬ್ರವರಿ ತಿಂಗಳಲ್ಲಿ ಹಮ್ಮಿಕೊಳ್ಳಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 45 ವರ್ಷದೊಳಗಿನ ನಿರುದ್ಯೋಗಿ ಯುವಕ -ಯುವತಿಯರಿಗೆ ಉದ್ಯೋಗ ಮಾಡಲು ಈ ತರಬೇತಿ ಅನೂಕುಲವಾಗಲಿದ್ದು, ತರಬೇತಿಯಲ್ಲಿ ಊಟ – ವಸತಿ ಉಚಿತವಗಿರುತ್ತದೆ. ಮೊದಲು ಬಂದವರು ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ.
ಅರ್ಜಿಯನ್ನು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್, ಹಳಿಯಾಳ ವಿಳಾಸಕ್ಕೆ ಜ. 22 ರೊಳಗೆ ತಲುಪುವಂತೆ ಕಳುಹಿಸಿಕೊಡಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ : 94834 85489, 94821 88780, 96322 25123, 08284 – 295 307, 220 807ಗೆ ಸಂಪರ್ಕಿಸಬಹುದಾಗಿದೆ ಎಂದು ಕೆನರಾ ಬ್ಯಾಂಕ್ ನಿರ್ದೇಶಕ ಪ್ರಸನ್ನಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment