
ಯಲ್ಲಾಪುರ: ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಪಟ್ಟಣದ ವೈ.ಟಿ.ಎಸ್.ಎಸ್. ಶಿಕ್ಷಣ ಸಂಸ್ಥೆಯ ನೂತನ ಶಾಲಾ ಸಂಕೀರ್ಣ, ಕಂಪ್ಯೂಟರ್ ಲ್ಯಾಬ್, ಮಕ್ಕಳ ಆಟದ ಮೈದಾನ ಹಾಗೂ ಸರ್ವ ಋತು ರಸ್ತೆಯನ್ನು ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ವೇಳೆ ವೈ.ಟಿ.ಎಸ್.ಎಸ್ ಶಿಕ್ಷಣ ಸಂಸ್ಥೆಯ ವತಿಯಿಂದ ಆಡಳಿತ ಮಂಡಳಿಯವರು ಸಚಿವ ಶಿವರಾಮ ಹೆಬ್ಬಾರ್ ಅವರನ್ನು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷ ಪ್ರಮೋದ ಹೆಗಡೆ,ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್.ಗಾಂವ್ಕರ್, ಯುವನಾಯಕ ವಿವೇಕ್ ಹೆಬ್ಬಾರ್,ತಹಶೀಲ್ದಾರ್ ಶ್ರೀಕೃಷ್ಣ ಕಾಮ್ಕರ್, ಪ.ಪಂ ಅಧ್ಯಕ್ಷೆ ಸುನಂದಾ ದಾಸ್, ಉಪಾಧ್ಯ ಕ್ಷೆ ಶ್ಯಾಮಿಲಿ ಪಾಟಣಕರ್,ಪ್ರಮುಖರಾದ ವಿಜಯ ಮಿರಾಶಿ, ಬಾಲಕೃಷ್ಣ ನಾಯಕ ಹಾಗೂ ವೈ.ಟಿ.ಎಸ್.ಎಸ್ ಶಿಕ್ಷಣ ಸಂಸ್ಥೆಯ ಪ್ರಮುಖರು, ಶಿಕ್ಷಕರು ಉಪಸ್ಥಿತರಿದ್ದರು.
Leave a Comment