ಕಾರವಾರ : ಸ್ನಾನಕ್ಕೆ ಹೋದ ವೇಳೆ ಸಮುದ್ರದ ಅಲೆಗೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಕಾರವಾರದ ಟ್ಯಾಗೋರ್ ಕಡಲತೀರದಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಪಟ್ಟಲಚಿಂತಿ ಗ್ರಾಮದ ಬಸವರಾಜ (32) ಮೃತಪಟ್ಟ ವ್ಯಕ್ತಿಯಾಗಿದ್ದು, ಕಾರವಾರದಲ್ಲಿ ಕಳೆದ ಹದಿನೈದು ದಿನದಿಂದ ಗೌಂಡಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ. ನಗರ ಪೊಲೀಸ್ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Leave a Comment