ಯಲ್ಲಾಪುರ : ಯಲ್ಲಾಪುರ, ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಶಿವರಾಮ ಹೆಬ್ಬಾರ್ ಅವರು ಕ್ಷೇತ್ರದ ಅಭಿವೃದ್ಧಿಗೆ ಕೈಗೊಂಡಿರುವ ಕಾಮಗಾರಿಗಳ ಮಾಹಿತಿಯನ್ನು ಸಾರ್ವಜನಿಕರಿಗೆ ತಲುಪಿಸುವ ಸದುದ್ದೇಶದಿಂದ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ” ಜನ ಸೇವಕ ” ಡಿಜಿಟಲ್ ಸಂಚಿಕೆಯನ್ನು ಸಿದ್ದಪಡಿಸಿದ್ದು,
ಪಟ್ಟಣದ ಪಕ್ಷದ ಕಾರ್ಯಾಲಯದಲ್ಲಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್.ಗಾಂವ್ಕರ್ ಹಾಗೂ ಉದ್ಯಮಿ ಬಾಲಕೃಷ್ಣ ನಾಯಕ ಅವರು ಜೊತೆಗೂಡಿ ” ಜನ ಸೇವಕ ಡಿಜಿಟಲ್ ” ಮಾಸಿಕ ಸಂಚಿಕೆಯನ್ನು ಲೋಕಾರ್ಪಣೆಗೊಳಿಸಿದರು.
ಈ ವೇಳೆ ಮಾತನಾಡಿದ ಸಚಿವಶಿವರಾಮ ಹೆಬ್ಬಾರ್ ಅವರು, ಪಕ್ಷದ ಕಾರ್ಯಕರ್ತರು ನಾವು ಕೈಗೊಂಡಿರುವ ಅಭಿವೃದ್ಧಿ ಕಾರ್ಯವನ್ನು ಮತದಾರರಿಗೆ ತಲುಪಿಸುವ ದೃಷ್ಟಿಯಿಂದ ಈ ಡಿಜಿಟಲ್ ಸಂಚಿಕೆಯನ್ನು ಪ್ರಾರಂಭಿಸಿದ್ದು ಮುಂದಿನ ಹಂತದಲ್ಲಿ ಗ್ರಾಮ ಪಂಚಾಯತ ಮಟ್ಟದ ಅಭಿವೃದ್ಧಿ ಕಾಮಗಾರಿಯ ಮಾಹಿತಿಯನ್ನು ಈ ಡಿಜಿಟಲ್ ಸಂಚಿಕೆಯಲ್ಲಿ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್.ಗಾಂವ್ಕರ್, ಉಪಾಧ್ಯಕ್ಷ ಶಿರಿಷ್ ಪ್ರಭು, ಪ್ರಧಾನ ಕಾರ್ಯದರ್ಶಿ ರವಿ ಭಟ್ ಬರಗದ್ದೆ, ಪಟ್ಟಣ ಪಂಚಾಯತ ಉಪಾಧ್ಯಕ್ಷರಾದ ಶ್ಯಾಮಲಿ ಪಾಟಣಕರ್, ಪ್ರಮುಖರಾದ ಬಾಲಕೃಷ್ಣ ನಾಯಕ, ಭಾಸ್ಕರ್ ನಾರ್ವೇಕರ್ ಹಾಗೂ ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.
Leave a Comment