ಕಾರವಾರ : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಡಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಸ್ವ- ಉದ್ಯೋಗ ಪ್ರಾರಂಭಿಸಲು ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರರಿಗೆ ನಿಗಮದಿಂದ ರೂ. 30 ಸಾವಿರ ಸಹಾಯಧವನ್ನು ನೀಡಲು ಅವಕಾಶವಿರುತ್ತದೆ.
ಈ ಯೋಜನೆಯಡಿಯಲ್ಲಿ ಸೌಲಭ್ಯವನ್ನು ಪಡೆಯಲಿಚ್ಛಿಸುವ ಅರ್ಹ ಲಿಂಗತ್ವ ಅಲ್ಪಸಂಖ್ಯಾತರು ಜ.29 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಎಲ್ಲಾ ಸೂಕ್ತ ಅಡಕಗಳೊಂದಿಗೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರವಾರ ವಿಳಾಸಕ್ಕೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಹಾಗೂ ನಿಗದಿತ ನಮೂನೆಗಾಗಿ ಆಯಾಯ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಹಾಗೂ ಉಪನಿದೇಶಕರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರವಾರ ಅವರನ್ನು ಸಂಪರ್ಕಿಸಬಹುದಾಗಿದೆ. ಎಂದು ಪ್ರಕಟಣೆ ತಿಳಿಸಿದೆ.
Leave a Comment