
ಯಲ್ಲಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಪಟ್ಟಣದ ನಾಯಕನಕೆರೆ ಬಳಿ ನಡೆದಿದೆ.

ಸರಕು ತುಂಬಿಕೊಂಡು ಮಹಾರಾಷ್ಟ್ರದಿಂದ ಕೇರಳ ಕಡೆಗೆ ಹೊರಟಿದ್ದ ಲಾರಿ ನಾಯಕನಕೆರೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಫುಟ್ ಪಾತ್ ಗೆ ಅಳವಡಿಸಿದ್ದ ರಕ್ಷಣಾ ಬೇಲಿಗೆ ಹೊಡೆದು, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಲಾರಿಯ ಮುಂಭಾಗ ಜಖಂಗೊಂಡಿದ್ದು, ವಿದ್ಯುತ್ ಕಂಬ ಮುರಿದು ಬಿದ್ದಿದೆ.

ಅಪಘಾತ ಸಂಭವಿಸುತ್ತಿದ್ದಂತೆ ಸಮೀಪದಲ್ಲಿದ್ದವರು ಹೆಸ್ಕಾಂಗೆ ಮಾಹಿತಿ ನೀಡಿ, ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಚಾಲಕ, ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ಪರಿಶೀಲಿಸಿದ್ದಾರೆ.
Leave a Comment