ಕಾರವಾರ : ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಯುವತಿಯೋರ್ವಳು ಸಮುದ್ರಕ್ಕೆ ಜಿಗಿದು ಆತ್ಮಹತ್ಯೆ ಮಾಡಕೊಂಡಿದ್ದಾಳೆ. ತಾಲೂಕಿನ ಬೈತ್ ಖೋಲ್ ನಿವಾಸಿ ಶೃದ್ಧಾ ವೈಂಗಣಕರ್ ಆತ್ಮಗತ್ಯೆ ಮಾಡಿಕೊಂಡ ಯುವತಿ. ಈಕೆಯ ಸ್ಕಿಜೋಪ್ರೇನಿಯಾ ಎಂಬ ಮಾನಸಿಕ ಖಾಯಿಲೆಯಿಂದ ಬಳುಲುತ್ತದ್ದು, ಹಲವು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು.
ಜ. 21 ರ ರಾತ್ರಿ 11 ಗಂಟೆಗೆ ಬೈತ್ ಖೋಲ್ ಬಂದರಿನ ಸಮೀಪದ ಸಮುದ್ರಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತ ಯುವತಿಯ ತಾಯಿ ಶಹರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾಳೆ. ಈ ಬಗ್ಗೆ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Leave a Comment