
ಯಲ್ಲಾಪುರ: ಸ್ಥಳೀಯವಾಗಿ ದೊರೆಯುವ ವಸ್ತುಗಳಿಂದ ವಿದ್ಯಾರ್ಥಿಗಳು ತಯಾರಿಸಿದ ಪುಷ್ಪಗುಚ್ಚಗಳು ಇಡಗುಂದಿಯ ವಿಶ್ವದರ್ಶನ ಪ್ರೌಢಶಾಲೆಯಲ್ಲಿ ಗಮನ ಸೆಳೆದವು.

ವಿಜ್ಞಾನ ವೇದಿಕೆ ಅಡಿ ಪರಿಸರ ಸ್ನೇಹಿ ಪುಷ್ಪಗುಚ್ಚ ಪ್ರದರ್ಶನ ಕಾರ್ಯಕ್ರಮ ನಡೆಸಲಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು. 40ಕ್ಕೂ ಅಧಿಕ ಮಕ್ಕಳು ತಮ್ಮ ಮನೆಯ ಸುತ್ತ ಬೆಳೆಯುವ ಹೂವುಗಳನ್ನು ಸಂಗ್ರಹಿಸಿ ಬಗೆ ಬಗೆಯ ಚಿತ್ತಾರ ರಚಿಸಿದ್ದರು. ಅಡಿಕೆ ಹಾಳೆ, ತೆಂಗಿನಗರಿ, ವಿವಿಧ ಎಲೆಗಳು ಹಾಗೂ ಬಗೆ ಬಗೆಯ ಹೂವುಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಪುಷ್ಪಗುಚ್ಚ ತಯಾರಿಸಿದ್ದರು. ವಿಜ್ಞಾನ ಶಿಕ್ಷಕಿ ಲತಾ ಹೆಗಡೆ ಇವರಿಗೆ ಮಾರ್ಗದರ್ಶನ ಮಾಡಿದರು. ಶಿಕ್ಷಕರಾದ ರಾಘವೇಂದ್ರ ಹೆಗಡೆ, ನವೀನಾ ಗುನಗಾ ಇದ್ದರು.
- ತೋಟಗಾರಿಕೆ ಇಲಾಖೆಯ ಗಾರ್ಡನ್ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
- ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
- ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ
- ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025
- ಸುಪ್ರೀಂ ಕೋರ್ಟ್ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025
Leave a Comment