
ಯಲ್ಲಾಪುರ : ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಸಿ.ಸಿ ರಸ್ತೆಗಳನ್ನು ಹಾಗೂ ಜೋಗಳೆಪಾಲದಿಂದ ಸಾಂಬೆಕುಂಬ್ರಿ ಅನ್ನು ಸಂಪರ್ಕಿಸುವ ನೂತನ ಸೇತುವೆಯನ್ನು ಉದ್ಘಾಟಿಸಿದರು.
ನಂತರ ಕಳಚೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಎಮ್.ಪಿ.ಎಮ್.ಸಿ ಗೋದಾಮು ಕಟ್ಟಡವನ್ನು ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ವಿವಿಧ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಸಿದ್ದ.ಈ ವೇಳೆ ಸ್ಥಳೀಯ ಯುವಕರು ಬೈಕ್ ರ್ಯಾಲಿ ಮುಂಖಾತರ ಸಚಿವರನ್ನು ಅದ್ಧೂರಿಯಿಂದ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ವಜ್ರಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮದ ಪ್ರಮುಖರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಬೂತ್ ಅಧ್ಯಕ್ಷರು, ಕಾರ್ಯಕರ್ತರು, ಅಧಿಕಾರಿಗಳು ಉಪಸ್ಥಿತರಿದ್ದರು.
Leave a Comment