• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನಕಲಿ ವಿಳಾಸ ನೀಡಿ ಜೀವಂತ ವ್ಯಕ್ತಿಯ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ಪಡೆದ 2ನೇ ಆರೋಪಿ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

January 30, 2022 by bkl news Leave a Comment

ಭಟ್ಕಳ: ಜಾಲಿ ಪಟ್ಟಣ ಪಂಚಾಯತ್‌ನಲ್ಲಿ ಜಾಲಿ ಜಂಗನಗದ್ದೆಯ ನಕಲಿ ವಿಳಾಸವನ್ನು ನೀಡಿ ಜೀವಂತ ವ್ಯಕ್ತಿಯ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ಪಡೆದಿದ್ದ ಪ್ರಕರಣದಲ್ಲಿ ಎರಡನೇ ಆರೋಪಿ ಹಾಸನದ ಎಚ್.ವಿ. ಹರ್ಷವರ್ಧನ್ ಅವರನ್ನು ಇಲ್ಲಿನ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯ ಆತನನ್ನು 7 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.

ಜಾಲಿ ಪಟ್ಟಣ ಪಂಚಾಯತ್‌ನಲ್ಲಿ ಮೀನಾಕ್ಷಿ ಬಿ.ಎಚ್. ಎನ್ನುವವರು ತಾನು ಎಚ್.ವಿ. ಹರ್ಷವರ್ಧನ ಈತನ ತಾಯಿಯಾಗಿದ್ದು ಆತನು ಜಾಲಿಯ ಜಂಗನಗದ್ದೆಯಲ್ಲಿ ವಾಸವಾಗಿರುವ ಬಾಡಿಗೆ ಮನೆಯಲ್ಲಿ ಮೃತ ಪಟ್ಟಿರುವುದಾಗಿ ಅರ್ಜಿ ಸಲ್ಲಿಸಿದ್ದು ನಂತರ ಅರ್ಜಿಯ ವಿಚಾರಣೆಯಾಗಿ, ಸ್ಥಳ ಪಂಚನಾಮೆಯಿಂದ ಆತ ಮೃತಪಟ್ಟಿರುವುದನ್ನು ದೃಢಪಡಿಸಿ ಆತನ ಮರಣ ಪ್ರಮಾಣ ಪತ್ರವನ್ನು ನೀಡಲಾಗಿತ್ತು.

ನಂತರ ವಿಮಾ ಕಂಪೆನಿಗೆ ಅವರು ಅರ್ಜಿ ಸಲ್ಲಿಸಿ ವಿಮೆಯ ಹಣವನ್ನು ಪಡೆಯಲು ಪ್ರಯತ್ನಿಸಿದಾಗ ಮರಣ ಪ್ರಮಾಣ ಪತ್ರ ನಕಲಿ ಎನ್ನುವುದನ್ನು ಮನಗಂಡ ವಿಮಾ ಕಂಪೆನಿಯವರು ಮರಣ ಪ್ರಮಾಣ ಪತ್ರದ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಜಾಲಿ ಪಟ್ಟಣ ಪಂಚಾಯತಕ್ಕೆ ಪತ್ರ ಬರೆದಿದ್ದು ನಂತರ ಕೂಲಂಕಷವಾಗಿ ಪರಿಶೀಲಿಸುವಾಗ ಮರಣ ಪ್ರಮಾಣ ಪತ್ರವೇ ನಕಲಿ ಎನ್ನುವುದು ಬೆಳಕಿಗೆ ಬಂದಿತ್ತು. ಜಾಲಿ ಆರೋಗ್ಯ ನಿರೀಕ್ಷಕ ವಿನಾಯಕ ನಾಯ್ಕ ಅವರು ನಗರ ಠಾಣೆಯಲ್ಲಿ ಈ ಕುರಿತು ದೂರು ದಾಖಲಿಸಿದ್ದರು.

ಪೊಲೀಸರು, ಆರೋಪಿಗಳಾದ ಮೀನಾಕ್ಷಿ ಬಿ.ಎಚ್, ಹಾಗೂ ಎಚ್.ವಿ. ಹರ್ಷವರ್ಧನ ಇವರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯು ಈಗಾಗಲೇ ಪ್ರಕರಣವೊಂದರಲ್ಲಿ ಮೈಸೂರು ಸೆಂಟ್ರಲ್ ಜೈಲ್‌ನಲ್ಲಿದ್ದು ಬಾಡಿ ವಾರಂಟ್ ಹೊರಡಿಸಿ ಆತನನ್ನು ಹಾಜರು ಪಡಿಸಲಾಗಿದ್ದು ವಿಚಾರಣೆ ನಡೆಸಿದ ಪ್ರಧಾನ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ. ನ್ಯಾಯಾಧೀಶ ಫವಾಜ್ ಪಿ.ಎ. ಅವರು ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಮಾಡಿದ್ದಾರೆ.

  • ಜೀವಂತ ವ್ಯಕ್ತಿಯ ಮರಣ ದಾಖಲೆ ಸೃಷ್ಟಿಸಿದ ಜಾಲಿ ಪಟ್ಟಣ ಪಂಚಾಯಿತಿ: ಪೊಲೀಸ್ ತನಿಖೆ ಜಾರಿIMG 20220122 WA0025
    Date
    January 22, 2022
  • ಹೊನ್ನಾವರದಲ್ಲಿ ನಕಲಿ ಜನನ ಪ್ರಮಾಣ ಪತ್ರದ ಜಾಲ..!WhatsApp Image 2021 11 02 at 21.01.12
    Date
    November 3, 2021
  • ನಕಲಿ ಪ್ರಮಾಣ ಪತ್ರ ಮಹಿಳೆ ವಿರುದ್ಧ ದೂರು
    Date
    March 12, 2022
  • ನಕಲಿ ರೇಷನ್ ಕಾರ್ಡ್ ಆರೋಪಿ ಬಂಧನWhatsApp Image 2021 08 24 at 10.38.37 PM
    Date
    August 25, 2021

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Bhatkal News, Canara News, Crime

Explore More:

About bkl news

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,217 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar