ಕಾರವಾರ : : ವೇಶ್ಯಾವಾಟಿಕೆ ನಡೆಯುತ್ತಿದ್ದ ಕಾರವಾರದ ಲಾಡ್ಜ್ ಮೇಲೆ ಪೊಲೀಸರು ದಾಳಿ ನಡೆಸಿ, ಯುವತಿಯೊರ್ವಳನ್ನು ರಕ್ಷಿಸಿದ್ದಾರೆ. ಕಾರವಾರದ ಸುಮಿತ್ರಾ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಆಧಾರದಲ್ಲಿ ಲಾಡ್ಜ್ ಮೇಲೆ ದಾಳಿ ನಡೆಸಿದ ಕಾರವಾರ ನಗರ ಠಾಣೆಯ ಪೊಲೀಸರು, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಜೋಡಿಯನ್ನು ವಶಕ್ಕೆ ಪಡೆದಿದ್ದಾರೆ.
ದಾಳಿಯ ವೇಳೆ ಕುಮಟಾದ ಸುಭಾಸ ರೋಡ್ ನ ನಿವಾಸಿ ಎನ್ನಲಾದ ಹೇಮಾಂಶು ನಾಯಕ ಎನ್ನುವಾತನ್ನು ಪೊಲೀಸರು ಬಂಧಿಸಿದ್ದು, ಲಾಡ್ಜ್ ನಡೆಸುತ್ತಿದ್ದ ಸತೀಶ ರಾಣೆ ಹಾಗೂ ಮಾಲಕ ವೆರ್ಣೇಕರ್ ಮೇಲೆಯೂ ಪ್ರಕರಣ ದಾಖಲಾಗಿದೆ. ಯುವತಿಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದ್ದು ನಗರ ಪೊಲೀಸರು ತನೀಖೆ ಕೈಗೊಂಡಿದ್ದಾರೆ.
Leave a Comment